Scholarship: ರಾಜ್ಯ ಸರ್ಕಾರದಿಂದ ವಿದ್ಯಾರ್ಥಿ’ಗಳಿಗೆ 170 ಕೋಟಿ ರೂ.ವಿದ್ಯಾರ್ಥಿ ವೇತನ ಬಿಡುಗಡೆ.

170 crore scholarship has been released by the state government

ವಿದ್ಯಾರ್ಥಿಗಳ ಸಬಲೀಕರಣಕ್ಕಾಗಿ ರಾಜ್ಯ ಸರ್ಕಾರ ₹170 ಕೋಟಿ ವಿದ್ಯಾರ್ಥಿವೇತನ ನಿಧಿಯನ್ನು ಪ್ರಕಟಿಸಿದೆ
ಶಿಕ್ಷಣವನ್ನು ಉತ್ತೇಜಿಸುವ ಮತ್ತು ರಾಜ್ಯದಾದ್ಯಂತ ವಿದ್ಯಾರ್ಥಿಗಳಿಗೆ ಸಮಾನ ಅವಕಾಶಗಳನ್ನು ಒದಗಿಸುವ ಗುರಿಯನ್ನು ಹೊಂದಿರುವ ಅದ್ಭುತ ಕ್ರಮದಲ್ಲಿ, ಸರ್ಕಾರವು ₹ 170 ಕೋಟಿ ವಿದ್ಯಾರ್ಥಿವೇತನವನ್ನು ಘೋಷಿಸಿದೆ. ಈ ಮಹತ್ವದ ಉಪಕ್ರಮವು ಸಾವಿರಾರು ಅರ್ಹ ವಿದ್ಯಾರ್ಥಿಗಳಿಗೆ ಪ್ರಯೋಜನವನ್ನು ನೀಡುತ್ತದೆ ಮತ್ತು ಯುವಜನರ ಉಜ್ವಲ ಭವಿಷ್ಯಕ್ಕೆ ದಾರಿ ಮಾಡಿಕೊಡುತ್ತದೆ.

170 crore scholarship has been released by the state government
170 crore scholarship has been released by the state government

₹170 ಕೋಟಿ ವಿದ್ಯಾರ್ಥಿವೇತನ ನಿಧಿಯನ್ನು ಆರ್ಥಿಕವಾಗಿ ಹಿಂದುಳಿದ ಕುಟುಂಬಗಳು, ಅಲ್ಪಸಂಖ್ಯಾತರು ಮತ್ತು ಇತರ ಕಡಿಮೆ ಪ್ರತಿನಿಧಿಸುವ ಗುಂಪುಗಳು ಸೇರಿದಂತೆ ವಿವಿಧ ಹಿನ್ನೆಲೆಯ ವಿದ್ಯಾರ್ಥಿಗಳನ್ನು ಸಬಲೀಕರಣಗೊಳಿಸಲು ವಿನ್ಯಾಸಗೊಳಿಸಲಾಗಿದೆ. ಹಣಕಾಸಿನ ನೆರವು ನೀಡುವ ಮೂಲಕ, ಹೆಚ್ಚಿನ ಶುಲ್ಕ ಮತ್ತು ವೆಚ್ಚಗಳ ಹೊರೆಯಿಲ್ಲದೆ ವಿದ್ಯಾರ್ಥಿಗಳು ತಮ್ಮ ಶೈಕ್ಷಣಿಕ ಆಕಾಂಕ್ಷೆಗಳನ್ನು ಮುಂದುವರಿಸಲು ಪ್ರೋತ್ಸಾಹಿಸುವ ಗುರಿಯನ್ನು ಸರ್ಕಾರ ಹೊಂದಿದೆ.

ಇನ್ನು ಓದಿ: ರೈತರಿಗೆ ಸಂತಸದ ಸುದ್ದಿ! ಪಿಎಂ ಕಿಸಾನ್ ಮೊತ್ತ 8,000 ರೂಪಾಯಿಗೆ ಏರಿಕೆಯಾಗುತ್ತಾ?

2.50 ಲಕ್ಷ ವಿದ್ಯಾರ್ಥಿಗಳಿಗೆ 2023-24 ಸಾಲಿನ 170.7 ಕೋಟಿ ರೂ

ಅಲ್ಪಸಂಖ್ಯಾತರ ಸಮುದಾಯದ 2.50 ಲಕ್ಷ ವಿದ್ಯಾರ್ಥಿಗಳಿಗೆ 2023-24 ಸಾಲಿನ 170.7 ಕೋಟಿ ರೂ. ವಿದ್ಯಾರ್ಥಿ ವೇತನ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹಮದ್ ಖಾನ್ ಬಿಡುಗಡೆ ಮಾಡಿದರು.

ಅಲ್ಪಸಂಖ್ಯಾತರ ಕಲ್ಯಾಣ ನಿರ್ದೇಶನಾಲಯದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪ್ರಾಥಮಿಕ, ಪ್ರೌಢ, ಪದವಿ ಪೂರ್ವ, ಪದವಿ ಹಾಗೂ ಉನ್ನತ ಶಿಕ್ಷಣ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ, ವಿದ್ಯಾಸಿರಿ ಯೋಜನೆಯಡಿಯಲ್ಲಿ ಹಾಸ್ಟೆಲ್ ಸೌಲಭ್ಯದ ಆರ್ಥಿಕ ನೆರವು ಬಿಡುಗಡೆಗೆ ಚಾಲನೆ ನೀಡಿ , ಇದೇ ಸಂದರ್ಭದಲ್ಲಿ ಇಲಾಖೆಯ ನೂತನ ಡೈರಿ, ಕ್ಯಾಲೆಂಡರ್ ಬಿಡುಗಡೆ ಮಾಡಿದರು.

1 ರಿಂದ 8 ನೇ ತರಗತಿ ವರೆಗಿನ 2, 35, 661 ವಿದ್ಯಾರ್ಥಿಗಳಿಗೆ 1 ಸಾವಿರ ರೂ

1 ರಿಂದ 8 ನೇ ತರಗತಿ ವರೆಗಿನ 2, 35, 661 ವಿದ್ಯಾರ್ಥಿಗಳಿಗೆ 1 ಸಾವಿರ ರೂ. ನಿಂದ 3,500 ರೂ. ವರೆಗೆ 90.30 ಕೋಟಿ ರೂ., ವಿದೇಶದಲ್ಲಿ ಉನ್ನತ ವ್ಯಾಸಂಗ ಮಾಡುವ 280 ವಿದ್ಯಾರ್ಥಿಗಳಿಗೆ ತಲಾ 20 ಲಕ್ಷ ರೂ. ನಂತೆ 25.27 ಕೋಟಿ ರೂ., ಪಿಎಚ್ ಡಿ, ಎಂ ಫಿಲ್ ವ್ಯಾಸಂಗ ಮಾಡುವ 308 ವಿದ್ಯಾರ್ಥಿಗಳಿಗೆ ಮಾಸಿಕ 10 ಸಾವಿರ ರೂ. ನಂತೆ 3.50 ಕೋಟಿ ರೂ., ಐ ಐ ಟಿ, ಐಐ ಎಂ ಪ್ರವೇಶ ಪಡೆದಿರುವ 19 ವಿದ್ಯಾರ್ಥಿಗಳಿಗೆ ತಲಾ 2 ಲಕ್ಷ ರೂ. ನಂತೆ 38 ಲಕ್ಷ ರೂ. ವಿದ್ಯಾಸಿರಿ ಯೋಜನೆಯಡಿಯಲ್ಲಿ ಹಾಸ್ಟೆಲ್ ಸೌಲಭ್ಯ ಸಿಗದ 3,330 ವಿದ್ಯಾರ್ಥಿಗಳಿಗೆ ತಲಾ 1,500 ರೂ. ನಂತೆ 13.50 ಕೋಟಿ ರೂ., ಬಿಡುಗಡೆ ಮಾಡಲಾಯಿತು.

Join Telegram Group Join Now
WhatsApp Group Join Now

ಇಲಾಖೆ ಕಾರ್ಯದರ್ಶಿ ಮನೋಜ್ ಜೈನ್, ನಿರ್ದೇಶಕ ಜಿಲಾನಿ ಮೊಕಾಶಿ, ವಖ್ಫ್ ಬೋರ್ಡ್ ಅಧ್ಯಕ್ಷ ಅನ್ವರ್ ಬಾಷಾ ಉಪಸ್ಥಿತರಿದ್ದರು.

Leave a Reply

ನಮ್ಮ WhatsApp ಗುಂಪಿಗೆ ಸೇರಲು ಇಲ್ಲಿ ಕ್ಲಿಕ್ ಮಾಡಿ