ರಾಜ್ಯದ ರೈತರಿಗೆ ಗುಡ್ ನ್ಯೂಸ್ : ಇಂದಿನಿಂದ ಪಂಪ್ ಸೆಂಟ್ ಗಳಿಗೆ 7 ಗಂಟೆ ತ್ರಿಫೇಸ್ ವಿದ್ಯುತ್ ಪೂರೈಕೆ.

ಪಂಪ್ ಸೆಂಟರ್ ಗಳಿಗೆ ನಿರಂತರ ತ್ರೀಫೇಸ್ ವಿದ್ಯುತ್ ಪೂರೈಕೆ ಮಾಡಿರುವುದು ಕೃಷಿ ಮತ್ತು ನೀರು ನಿರ್ವಹಣೆಯಲ್ಲಿ ಕ್ರಾಂತಿಯ ಭರವಸೆ ಮೂಡಿಸುವ ಮೈಲಿಗಲ್ಲು. ಕೃಷಿಯು ಆರ್ಥಿಕತೆಯ ಬೆನ್ನೆಲುಬಾಗಿರುವ ದೇಶದಲ್ಲಿ, ಉತ್ಪಾದಕತೆಯನ್ನು ಹೆಚ್ಚಿಸಲು ಮತ್ತು ಅಸಂಖ್ಯಾತ ರೈತರ ಜೀವನೋಪಾಯವನ್ನು ಸುಧಾರಿಸಲು ಸ್ಥಿರ ಮತ್ತು ವಿಶ್ವಾಸಾರ್ಹ ವಿದ್ಯುತ್ ಸರಬರಾಜು ಅತ್ಯಗತ್ಯ.

7 hours three phase power supply to pump centers from today
7 hours three phase power supply to pump centers from today

ರಾಜ್ಯದ ರೈತರಿಗೆ ಸಿಎಂ ಸಿದ್ದರಾಮಯ್ಯ ಗುಡ್ ನ್ಯೂಸ್ ನೀಡಿದ್ದು, ಇಂದಿನಿಂದ ರೈತರ ಪಂಪ್ ಸೆಂಟ್ ಗಳಿಗೆ 7 ಗಂಟೆ ನಿರಂತರ ವಿದ್ಯುತ್ ನೀಡುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಇನ್ನು ಓದಿ ; ಕೇಂದ್ರ ಸರ್ಕಾರದಿಂದ ಸಿಗಲಿದೆ ಪ್ರತಿ ಮನೆಗೆ ಫ್ಯಾನ್ ಮತ್ತು ಅಡುಗೆ ಮಾಡಲು ಇಂಡಕ್ಷನ್, ಕೇಂದ್ರದ ಘೋಷಣೆ.

ಗೃಹ ಕಚೇರಿ ಕೃಷ್ಣಾದಲ್ಲಿ ಇಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಇಂಧನ ಇಲಾಖೆಯ ಜೊತೆ ಪರಿಶೀಲನೆ ಸಭೆ ನಡೆದಿದ್ದು, ಸಭೆ ಬಳಿಕ ಸಿಎಂ ಸಿದ್ದರಾಮಯ್ಯ ಮಾತನಾಡಿದರು.

ರೈತರ ಪಂಪ್ ಸೆಂಟ್ ಗಳಿಗೆ 7 ಗಂಟೆ ನಿರಂತರ ವಿದ್ಯುತ್ ನೀಡುತ್ತೇವೆ ಎಂದು ಈ ಹಿಂದೆಯೇ ಘೋಷಿಸಿದ್ದೆವು, ಅಂತೆಯೇ ಇಂದಿನಿಂದ ರೈತರ ಪಂಪ್ ಸೆಂಟ್ ಗಳಿಗೆ 7 ಗಂಟೆ ನಿರಂತರ ವಿದ್ಯುತ್ ನೀಡುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಈ ಬಗ್ಗೆ ಇಂಧನ ಇಲಾಖೆ ಜೊತೆ ಕಳೆದ ವಾರವೇ ಸಭೆ ನಡೆಸಿ ವಿದ್ಯುತ್ ನೀಡುವ ಬಗ್ಗೆ ನಿರ್ಧರಿಸಿದ್ದೇವೆ ಎಂದರು.

ಇನ್ನು ಓದಿ : “ಅನ್ನಭಾಗ್ಯ, ಗೃಹಲಕ್ಷ್ಮಿ” ಸೇರಿ ವಿವಿಧ ಯೋಜನೆ ಫಲಾನುಭವಿಗಳಿಗೆ ಗುಡ್ ನ್ಯೂಸ್ : ಇನ್ಮುಂದೆ ನಿಗಧಿತ ಅವಧಿಯೊಳಗೆ ಖಾತೆಗೆ ಹಣ ಜಮಾ!

Join Telegram Group Join Now
WhatsApp Group Join Now

ಅದೇ ರೀತಿ ವಿದ್ಯುತ್ ಕೊರತೆ ನೀಗಿಸಲು ಬೇರೆ ರಾಜ್ಯಗಳಿಂದ ಕಲ್ಲಿದ್ದಲು ಖರೀದಿ ಬಗ್ಗೆ ಇಂಧನ ಇಲಾಖೆ ಚಿಂತನೆ ನಡೆಸಿದೆ. ರಾಜ್ಯದಲ್ಲಿ ಉಂಟಾದ ವಿದ್ಯುತ್ ಕೊರತೆ ನೀಗಿಸಲು ಬೇರೆ ರಾಜ್ಯಗಳಿಂದ ಕಲ್ಲಿದ್ದಲು ಖರೀದಿಗೆ ರಾಜ್ಯ ಸರ್ಕಾರ ಚಿಂತನೆ ನಡೆಸಿದೆ ಎಂದು ತಿಳಿದು ಬಂದಿದೆ. . ಸಭೆಯಲ್ಲಿ ಇಂಧನ ಸಚಿವ ಕೆ.ಜೆ ಚಾರ್ಜ್ ಮತ್ತು ಇಲಾಖೆಯ ಹಿರಿಯ ಅಧಿಕಾರಿಗಳು ಮತ್ತಿತರರು ಉಪಸ್ಥಿತರಿದ್ದರು.

Leave a Reply

ನಮ್ಮ WhatsApp ಗುಂಪಿಗೆ ಸೇರಲು ಇಲ್ಲಿ ಕ್ಲಿಕ್ ಮಾಡಿ