ಮನೆಯಲ್ಲಿಯೇ ಕುಳಿತು ಅನ್ನಭಾಗ್ಯ ಯೋಜನೆಯ ಹಣ ಖಾತೆಗೆ ಜಮಾ ಆಗಿದೆಯಾ ಎಂದು ಈ ರೀತಿ ಚೆಕ್ ಮಾಡಿಕೊಳ್ಳಿ. ಮೊಬೈಲ್ ನಲ್ಲಿ ಚೆಕ್ ಮಾಡಿಕೊಳ್ಳಿ.

Hello ಸ್ನೇಹಿತರೇ, ರಾಜ್ಯ ಸರ್ಕಾರದ ಉಚಿತ ಯೋಜನೆಗಳ ಲಾಭ ಪಡೆಯಲು ರಾಜ್ಯದ ಜನತೆ ಕಾಯುತ್ತಿದ್ದಾರೆ. ಈಗಾಗಲೇ ರಾಜ್ಯದ ಮಹಿಳೆಯರು ಶಕ್ತಿ ಯೋಜನೆಯ ಸಂಪೂರ್ಣ ಲಾಭವನ್ನು ಪಡೆಯುತ್ತಿದ್ದಾರೆ. ಇನ್ನು ಗೃಹ ಜ್ಯೋತಿ ಯೋಜನೆಯಿಂದಾಗಿ ಜುಲೈತಿಂಗಳಿಂದ ಅರ್ಹ ಫಲಾನುಭವಿಗಳು ಉಚಿತ 200 ಯುನಿಟ್ ವಿದ್ಯುತ್ ಪಡೆಯುತ್ತಿದ್ದಾರೆ. ಗೃಹ ಲಕ್ಷ್ಮಿ ಯೋಜನೆಯ ಅಡಿಯಲ್ಲಿ ಪ್ರತಿ ಮನೆ ಒಡತಿಗೆ ಮಾಸಿಕ 2000 ಆಗಸ್ಟ್ ಅಂತ್ಯದಲ್ಲಿ ಜಮಾ ಆಗಲಿದೆ. ಇವೆಲ್ಲದರ ನಡುವೆ ಇದೀಗ ಅನ್ನಭಾಗ್ಯ ಯೋಜನೆಯು ಕೂಡ ಫಲಾನುಭವಿಗಳಿಗೆ ತಲುಪುತ್ತಿದೆ.

anna bhagya money transfer status
anna bhagya money transfer status

ರಾಜ್ಯ ಸರ್ಕಾರ ಅನ್ನಭಾಗ್ಯ ಯೋಜನೆ

ಸರ್ಕಾರ ಬಡತನ ರೇಖೆಗಿಂತ ಕೆಳಗಿರುವವರು ಉಚಿತ ಪಡಿತರನ್ನು ನೀಡಿತ್ತು. ವಿಧಾನಸಭಾ ಚುನಾವಣೆಯ ಬಳಿಕ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಉಚಿತ ಅನ್ನ ಭಾಗ್ಯ ಯೋಜನೆ ಇನ್ನಷ್ಟು ಬೇಡಿಕೆ ಪಡೆದುಕೊಂಡಿದೆ. ಅನ್ನ ಭಾಗ್ಯ ಯೋಜನೆಯಡಿ ಉಚಿತವಾಗಿ 10 ಕೆಜಿ ಅಕ್ಕಿ ನೀಡುವುದಾಗಿ ರಾಜ್ಯವೂ ಸಾರ್ಕಾರ ಘೋಷಿಸಿತ್ತು. ಆದರೆ ಅನಿವಾರ್ಯ ಕಾರಣಗಳಿಂದ 5 ಕೆಜಿ ಅಕ್ಕಿ ಹಾಗು 5 ಕೆಜಿ ಅಕ್ಕಿಯ ಬದಲಾಗಿ ಹಣವನ್ನು ನೀಡುವುದಾಗಿ ಸರ್ಕಾರ ಘೋಷಣೆ ಹೊರಡಿಸಿದೆ. ಪ್ರತಿ ಕೆಜಿಗೆ 34 ರೂ. ಗಳಂತೆ 170 ರೂ. ನೀಡುವುದಾಗಿ ಘೋಷಣೆ ಹೊರಡಿಸಿತ್ತು.

ಈ ಉಚಿತ ಅಕ್ಕಿಯ ಜೊತೆಗೆ ಹಣದ ಸೌಲಭ್ಯವನ್ನು ಅರ್ಹ ಫಲಾನುಭವಿಗಳು ಜುಲೈ ನಲ್ಲಿಯೇ ಪಡೆದಿದ್ದರು. ಜುಲೈ ತಿಂಗಳಲ್ಲಿ ಅಕ್ಕಿಯ ಬದಲಾಗಿ ಸಿಗಬೇಕಾಗಿದ್ದ ಹಣ ತಲುಪಿದೆ ಇದೀಗ ಆಗಸ್ಟ್ ತಿಂಗಳಿನಲ್ಲಿ ಸಿಗಬೇಕಾದ ಹಣ ಜಮಾ ಆಗಿದೆಯಾ ಅಥವಾ ಇಲ್ಲವ ಅನ್ನುವುದನ್ನು ತಿಳಿದುಕೊಳ್ಳಬೇಕಿದೆ. ಹಣ ಖಾತೆಗೆ ಜಮಾ ಆಗಿರುವ ಬಗ್ಗೆ ತಿಳಿದುಕೊಳ್ಳಲು ನೀವು ಈ ಸುಲಭ ವಿಧಾನವನ್ನು ಅನುಸರಿಸಬಹುದು. ಮನೆಯಲ್ಲಿಯೇ ಕುಳಿತು ಈ ರೀತಿಯಾಗಿ ನಿಮ್ಮ ಖಾತೆಗೆ ಹಣ ಜಮಾ ಆಗಿದೆಯಾ ಅಥವಾ ಇಲ್ಲವ ಎನ್ನುವುದನ್ನು ಪರಿಶೀಲಿಸಿಕೊಳ್ಳಬಹುದು.

ಅನ್ನಭಾಗ್ಯ ಹಣ ಖಾತೆಗೆ ಜಮಾ ಆಗಿರುವ ಬಗ್ಗೆ ಪರಿಶೀಲಿಸಿಕೊಳ್ಳುವ ವಿಧಾನ

*ಆಹಾರ ಇಲಾಖೆಯ ಅಧಿಕೃತ ವೆಬ್ ಸೈಟ್ https://ahara.kar.nic.in/ ಭೇಟಿ ನೀಡುವ ಮೂಲಕ ಅನ್ನಭಾಗ್ಯ ಹಣ ಖಾತೆಗೆ ಜಮಾ ಆಗಿರುವ ಬಗ್ಗೆ ಪರಿಶೀಲಿಸಿಕೊಳ್ಳಬಹುದು.

*ಅಲ್ಲಿ ನಿಮ್ಮ ಜಿಲ್ಲೆಯ ಹೆಸರುಗಳನ್ನೂ ಪ್ರಕಟಿಸಲಾಗುತ್ತದೆ. ನಿಮ್ಮ ಜಿಲ್ಲೆಯ ಆಯ್ಕೆಯ ಬಳಿಕ ಪಡಿತರ ಚೀಟಿ ಸಂಖ್ಯೆ ಸೇರಿದಂತಯೇ ಅಲ್ಲಿ ಕೇಳಲಾದ ಮಾಹಿತಿಯನ್ನು ನೀಡಿದರೆ ನೀವು ಸುಲಭವಾಗಿ ಅನ್ನಭಾಗ್ಯ ಯೋಜನೆಯ ಹಣ ಜಮಾ ಆಗಿರುವಾ ಬಗ್ಗೆ ಮಾಹಿತಿ ತಿಳಿದುಕೊಳ್ಳಬಹುದು.

Leave a Reply

ನಮ್ಮ WhatsApp ಗುಂಪಿಗೆ ಸೇರಲು ಇಲ್ಲಿ ಕ್ಲಿಕ್ ಮಾಡಿ