ಜಿಲ್ಲಾ ನ್ಯಾಯಾಲಯದಲ್ಲಿ ಉದ್ಯೋಗಾವಕಾಶ; 54 ಪ್ಯೂನ್, ಸ್ಟೆನೋಗ್ರಾಫರ್ ಹುದ್ದೆಗಳಿಗೆ ಅರ್ಜಿ ಆಹ್ವಾನ.

Application invited for 54 Peon Stenographer Vacancies in District Court
Application invited for 54 Peon Stenographer Vacancies in District Court

 ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಶೀಘ್ರ ಲಿಪಿಗಾರ, ಜವಾನ ಸೇರಿದಂತೆ ಒಟ್ಟು 54 ಹುದ್ದೆಗಳ ನೇಮಕಾತಿ ನಡೆಸಲಾಗುವುದು. ಅರ್ಹ ಮತ್ತು ಸೂಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಈ ಹುದ್ದೆ ಕುರಿತು ಅರ್ಜಿ ಸಲ್ಲಿಕೆ ಸೇರಿದಂತೆ ಸಂಪೂರ್ಣ ಮಾಹಿತಿ ಇಲ್ಲಿದೆ.

ಹುದ್ದೆ ವಿವರ:

ಜಿಲ್ಲಾ ನ್ಯಾಯಾಲಯದಲ್ಲಿ ಒಟ್ಟು 54 ಹುದ್ದೆಗಳು ಖಾಲಿ ಇದ್ದು, ಆ ಹುದ್ದೆಗಳ ಮಾಹಿತಿ ಇಲ್ಲಿದೆ.

ಶೀಘ್ರ ಲಿಪಿಗಾರ ಹುದ್ದೆ- 10

ಬೆರಳಚ್ಚುಗಾರ ಹುದ್ದೆ 6

ಬೆರಳಚ್ಚು-ನಕಲುಗಾರ ಹುದ್ದೆ- 2

Join Telegram Group Join Now
WhatsApp Group Join Now

ಜವಾನ ಹುದ್ದೆಗಳು -36

ವಿದ್ಯಾರ್ಹತೆ:

ಶೀಘ್ರ ಲಿಪಿಗಾರ, ಬೆರಳಚ್ಚುಗಾರ ಮತ್ತು ನಕಲಿಗಾರ ಹುದ್ದೆಗೆ ಅಭ್ಯರ್ಥಿಗಳು ದ್ವಿತೀಯ ಪಿಯುಸಿ ಅಥವಾ ಡಿಪ್ಲೋಮಾ ಇನ್ ಕರ್ಮಷಿಯಲ್ ಪ್ರಾಕ್ಟೀಸ್ ವಿದ್ಯಾರ್ಹತೆ ಹೊಂದಿರಬೇಕು. ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ನಡೆಸುವ ಕನ್ನಡ ಮತ್ತು ಆಂಗ್ಲ ಭಾಷೆಯ ಶೀಘ್ರ ಲಿಪಿ ಮತ್ತು ಬೆರಳಚ್ಚಿನಲ್ಲಿ ಹಿರಿಯ ದರ್ಜೆ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.

ಜವಾನ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 10ನೇ ತರಗತಿ ಉತ್ತೀರ್ಣರಾಗಿರಬೇಕು.

ವಯೋಮಿತಿ:

ಈ ಹುದ್ದೆಗೆ ಅರ್ಜಿ ಸಲ್ಲಿಸವ ಅಭ್ಯರ್ಥಿಗಳು ಕನಿಷ್ಟ 18 ವರ್ಷ ಗರಿಷ್ಠ 35 ವರ್ಷ ಪೂರೈಸಿರಬೆಕು. ಪ. ಜಾ, ಪ.ಪಂ ಮತ್ತು ಪ್ರವರ್ಗ 1 ಅಭ್ಯರ್ಥಿಗಳಿಗೆ 5 ವರ್ಷ, ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ 3 ವರ್ಷ ಮತ್ತು ವಿಕಲಚೇತನ, ವಿಧವಾ ಅಭ್ಯರ್ಥಿಗಳಿಗೆ 10 ವರ್ಷ ವಯೋಮಿತಿ ಸಡಿಲಿಕೆ ಮಾಡಲಾಗಿದೆ.

ಅರ್ಜಿ ಸಲ್ಲಿಕೆ:

ಈ ಹುದ್ದೆಗೆ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ. ಸಾಮಾನ್ಯ, ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ 200 ರೂ. ಅರ್ಜಿ ಶುಲ್ಕ ವಿಧಿಸಲಾಗಿದೆ. ಉಳಿದ ಮೀಸಲಾತಿ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ.

ಆಯ್ಕೆ ಪ್ರಕ್ರಿಯೆ:

ಈ ಹುದ್ದೆಗೆ ಅಭ್ಯರ್ಥಿಗಳನ್ನು ಮೆರಿಟ್, ಟೈಪಿಂಗ್, ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಇನ್ನು ಈ ಹುದ್ದೆಗೆ ನವೆಂಬರ್ 6ರಿಂದ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದ್ದು, ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಡಿಸೆಂಬರ್ 5 ಆಗಿದೆ.

ಈ ಕುರಿತು ಸಂಪೂರ್ಣ ಮಾಹಿತಿ ಮತ್ತು ಅಧಿಕೃತ ಅಧಿಸೂಚನೆಗೆ ಅಭ್ಯರ್ಥಿಗಳು dk.dcourts.gov.in ಇಲ್ಲಿಗೆ ಭೇಟಿ ನೀಡಬಹುದಾಗಿದೆ.

Leave a Reply

ನಮ್ಮ WhatsApp ಗುಂಪಿಗೆ ಸೇರಲು ಇಲ್ಲಿ ಕ್ಲಿಕ್ ಮಾಡಿ