ಮಂಗಳವಾರ ಕಾವೇರಿಗಾಗಿ ‘ಬೆಂಗಳೂರು ಬಂದ್​’! ಹೇಗಿರುತ್ತೆ ಬಂದ್​? ಯಾರೆಲ್ಲ ಬೆಂಬಲ ಕೊಟ್ಟಿದ್ದಾರೆ?

ಬೆಂಗಳೂರು ಬಂದ್ ದಿನ ಟೌನ್ ಹಾಲ್​​ನಿಂದ ಫ್ರೀಡಂ ಪಾರ್ಕ್ ವರೆಗೆ ಬೃಹತ್ ರ್ಯಾಲಿ ಹಮ್ಮಿಕೊಳ್ಳಲು ಉದ್ದೇಶಿಸಲಾಗಿದೆ.ಕೆಲವೇ ಕ್ಷಣಗಳಲ್ಲಿ ಸಭೆಯಿಂದ ಬಂದ್ ದಿನಾಂಕ ಅಧಿಕೃತ ಘೋಷಣೆಯಾಗುವ ಸಾಧ್ಯತೆ ಇದೆ. ಆ ಬಳಿಕ, ಬಂದ್ ದಿನ ಏನೆಲ್ಲ ಸೇವೆಗಳು ಲಭ್ಯವಿರಲಿವೆ, ಯಾವೆಲ್ಲ ಸೇವೆಗಳು ಬಂದ್ ಆಗಲಿವೆ ಎಂಬ ಮಾಹಿತಿ ದೊರೆಯಲಿದೆ.

cauvery water issue bengaluru bandh on tuesday
cauvery water issue bengaluru bandh on tuesday

ಮಂಡ್ಯ ಬಂದ್ (Mandya Bandh)​ ಮುಗೀತು, ಈಗ ಬೆಂಗಳೂರು ಬಂದ್​ (Bengaluru Bandh) ಸರದಿ. ಅರ್ಧ ಕಾವೇರಿ ನೀರನ್ನು (Cauvery Water) ಬಳಸುವ ಬೆಂಗಳೂರಿಗರಿಗೂ ಮಂಗಳವಾರ ಬಂದ್​ ಬಿಸಿ ತಟ್ಟಲಿದೆ. ಬೆಂಗಳೂರು ಬಂದ್​ ಮುಗಿದ್ಮೇಲೆ ಸಮಗ್ರ ಕರ್ನಾಟಕ ಬಂದ್​​ಗೂ (Karnataka Bandh) ವೇದಿಕೆ ರೆಡಿಯಾಗುತ್ತಿದೆ. ಕೆಆರ್​​ಎಸ್​ನಲ್ಲಿ (KRS Dam) ಸಂಗ್ರಹ ಆಗೋ ಅರ್ಧ ನೀರನ್ನು ಬಳಸೋದು ಬೆಂಗಳೂರಿನ ಜನ. 1 ತಿಂಗಳಿನಿಂದ ಕಾವೇರಿಗಾಗಿ ಹೋರಾಟ ನಡೆಯುತ್ತಿದ್ದರೂ ಬೆಂಗಳೂರಿನ (Bengaluru) ಜನ ಅಷ್ಟಾಗಿ ತಲೆಕೆಡಿಸಿಕೊಂಡಿರ್ಲಿಲ್ಲ. ಈಗ ಮಂಗಳವಾರ ಅಂದ್ರೆ ಸೆಪ್ಟೆಂಬರ್​​ 26ಕ್ಕೆ ಬೆಂಗಳೂರಿನ ಜನರಿಗೆ ಕಾವೇರಿ ನೀರಿನ ಮಹತ್ವ ಅರ್ಥ ಮಾಡಿಸೋಕೆ ಬಂದ್​ಗೆ ಕರೆಕೊಟ್ಟಿದ್ದಾರೆ.


ಹೇಗಿರುತ್ತೆ ಬೆಂಗಳೂರು ಬಂದ್​?


ಸೆಪ್ಟೆಂಬರ್ 26ರ ಬೆಳಗ್ಗೆ 11ಕ್ಕೆ ಟೌನ್‌ಹಾಲ್‌ ಬಳಿ ಭಾರೀ ಪ್ರತಿಭಟನೆ ನಡೆಯಲಿದೆ. ನಂತರ ಅಲ್ಲಿಂದ ರ್ಯಾಲಿ ಮಾಡಲು ತೀರ್ಮಾನಿಯಲಾಗಿದೆ. ಬೆಂಗಳೂರು ಬಂದ್‌ಗೆ 49 ಕ್ಕೂ ಹೆಚ್ಚು ಸಂಘಟನೆಗಳು ಬೆಂಬಲ ನೀಡಿವೆ. ಇನ್ನು ರೈತರ ಹೋರಾಟಗಾರ ಕುರುಬೂರು ಶಾಂತಕುಮಾರ್ ಮಾತನಾಡಿದ್ದು, ಬೆಂಗಳೂರು ಬಂದ್‌ಗೆ ಕೈಗಾರಿಕೆಗಳು, ಸಂಘ ಸಂಸ್ಥೆಗಳು. ಐಟಿ ಕಂಪನಿಗಳೂ ಸಹಕಾರ ನೀಡಬೇಕು ಅಂತ ಮನವಿ ಮಾಡಿದ್ದು ಬಂದ್​ ಮೂಲಕ ಕಾವೇರಿ ನೀರು ನಿಲ್ಲಿಸುವಂತೆ ಸರ್ಕಾರಕ್ಕೆ ಕಡೇ ವಾರ್ನಿಂಗ್​ ನೀಡೋದು ಸಂಘಟನೆಗಳ ಎಚ್ಚರಿಕೆ.

kaveri bandh tuesday in kannada

ಬೆಂಗಳೂರು, ಸೆಪ್ಟೆಂಬರ್ 23: ತಮಿಳುನಾಡಿಗೆ ಕಾವೇರಿ ನೀರು (Cauvery Water) ಹರಿಸುವುದನ್ನು ಖಂಡಿಸಿ ಮಂಗಳವಾರ ಬೆಂಗಳೂರು ನಗರ ಬಂದ್​​ಗೆ (Bangalore Bandh) ಕರೆ ನೀಡಲಾಗಿದೆ. ವಿವಿಧ ಸಂಘಟನೆಗಳು ಬಂದ್​ಗೆ ಕರೆ ನೀಡಿದ್ದು, ಅಧಿಕೃತ ಘೋಷಣೆ ಇನ್ನಷ್ಟೇ ಮಾಡಬೇಕಿದೆ. ಈ ಮಧ್ಯೆ, ತಮಿಳುನಾಡಿಗೆ ನೀರು ಬಿಡುವ ಸರ್ಕಾರದ ನಿರ್ಧಾರ ಖಂಡಿಸಿ ಮಂಡ್ಯ, ಮದ್ದೂರು, ಬೆಂಗಳೂರು, ಬೆಂಗಳೂರು ಗ್ರಾಮಾಂತರ ಪ್ರದೇಶಗಳಲ್ಲಿ ಶನಿವಾರ ಭಾರಿ ಪ್ರತಿಭಟನೆ ನಡೆದಿದೆ. ಬೆಂಗಳೂರಿನಲ್ಲಿ ಪ್ರತಿಭಟನಾ ನಿರತ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ ಹಾಗೂ ಇತರ ಬಿಜೆಪಿ ನಾಯಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಬೆಂಗಳೂರು ಬಂದ್ ದಿನ ಟೌನ್ ಹಾಲ್​​ನಿಂದ ಫ್ರೀಡಂ ಪಾರ್ಕ್ ವರೆಗೆ ಬೃಹತ್ ರ್ಯಾಲಿ ಹಮ್ಮಿಕೊಳ್ಳಲು ಉದ್ದೇಶಿಸಲಾಗಿದೆ. ಕೆಲವೊಂದು ಸಂಘಟನೆಗಳ ನಾಯಕರು ಸೋಮವಾರವೇ ಬೆಂಗಳೂರು ಬಂದ್ ಮಾಡೋಣ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಬೆಂಗಳೂರು ಬಂದ್ ಆದರೆ ರಾಜ್ಯಕ್ಕೆ ದೊಡ್ಡ ಸಂದೇಶ ಹೋಗುತ್ತದೆ. ಹಾಗಾಗಿ ಬೆಂಗಳೂರಿನಲ್ಲಿ ದೊಡ್ಡ ಮಟ್ಟದಲ್ಲಿ ಶಕ್ತಿ ಪ್ರದರ್ಶನ ಮಾಡಬೇಕು ಎಂದು ಸಂಘಟನೆಗಳ ನಾಯಕರು ಅಭಿಪ್ರಾಯ ವ್ಯಕ್ತಪಡಿಸ್ತಿದ್ದಾರೆ.

ಕೆಲವೇ ಕ್ಷಣಗಳಲ್ಲಿ ಸಭೆಯಿಂದ ಬಂದ್ ದಿನಾಂಕ ಅಧಿಕೃತ ಘೋಷಣೆಯಾಗುವ ಸಾಧ್ಯತೆ ಇದೆ. ಆ ಬಳಿಕ, ಬಂದ್ ದಿನ ಏನೆಲ್ಲ ಸೇವೆಗಳು ಲಭ್ಯವಿರಲಿವೆ, ಯಾವೆಲ್ಲ ಸೇವೆಗಳು ಬಂದ್ ಆಗಲಿವೆ ಎಂಬ ಮಾಹಿತಿ ದೊರೆಯಲಿದೆ. ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಅಧಿಕೃತವಾಗಿ ಘೋಷಣೆ ಮಾಡುವ ಸಾಧ್ಯತೆ ಇದೆ. ಎಲ್ಲರೂ ಒಟ್ಟಾಗಿ ಹೋಗೋಣ ಎಂದು ಸಂಘಟನೆ ಮುಖಂಡರು ಅಭಿಪ್ರಾಯ ಪಟ್ಟಿದ್ದಾರೆ.

Join Telegram Group Join Now
WhatsApp Group Join Now

ನುಡಿದಂತೆ ಸರ್ಕಾರ ನಡೆದಿಲ್ಲ; ಅಶ್ವತ್ಥನಾರಾಯಣ

ತಮಿಳುನಾಡಿಗೆ ನೀರು ಬಿಡುವ ವಿಚಾರವಾಗಿ ಸರ್ಕಾರ ಯಡವಟ್ಟಿನ ನಿರ್ಧಾರ ಕೈಗೊಂಡಿದೆ. ಮಳೆ ಕೊರತೆಯ ಕಾರಣ ನೀರು ಬಿಡುವುದು ಬೇಡ. ನೀರು ಇರುವುದು ಕೇವಲನ ತಮಿಳುನಾಡಿಗೆ ಮಾತ್ರವಲ್ಲ. ನುಡಿದಂತೆ ಸರ್ಕಾರ ನಡೆದಿಲ್ಲ ಎಂದು ಬಿಜೆಪಿ ನಾಯಕ, ಮಾಜಿ ಸಚಿವ ಅಶ್ವತ್ಥನಾರಾಯಣ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಬೆಂಗಳೂರಿನಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ನೀರು ಬಿಡಲ್ಲ ಎಂದು ಮೊದಲು ಹೇಳಿದ್ದರು. ಆದರೆ ಈಗ ಬಿಡುತ್ತಿದ್ದಾರೆ. ತಮ್ಮ ಅಧಿಕಾರ ಉಳಿಸಿಕೊಳ್ಳಲು ಈ ರೀತಿ ನಿರ್ಧಾರ ಕೈಗೊಂಡಿದ್ದಾರೆ. ನೀರು ಬಿಡುಗಡೆ ಮಾಡುವುದನ್ನ ತಕ್ಷಣವೇ ನಿಲ್ಲಿಸಬೇಕು ಎಂದು ಆಗ್ರಹಿಸಿದ್ದಾರೆ. ಎಲ್ಲಾ ಹಂತದಲ್ಲೂ ಸರ್ಕಾರ ವಿಫಲ ವಾಗಿದೆ ಎಂದು ಅವರು ಟೀಕಿಸಿದ್ದಾರೆ.

ತಮಿಳುನಾಡಿಗೆ ನೀರು ಹರಿಸುವಂತೆ ಸುಪ್ರೀಂಕೋರ್ಟ್ ನಿನ್ನೆ(ಸೆ.21) ಆದೇಶ ನೀಡಿದೆ. ಈ ಹಿನ್ನೆಲೆ ಇಂದು ರೈತರು ಹಾಗೂ ಕನ್ನಡಪರ ಸಂಘಟನೆಗಳಿಂದ ಪ್ರತಿಭಟನೆ ನಡೆಯುತ್ತಿದೆ. ಹೀಗಾಗಿ ಬೆಂಗಳೂರಿನಾದ್ಯಂತ ಕಟ್ಟೆಚ್ಚರ ವಹಿಸಲು ಪೊಲೀಸ್ ಆಯುಕ್ತ ದಯಾನಂದ್ ಸೂಚನೆ ನೀಡಿದ್ದಾರೆ.

ಇದರ ಜೊತೆಗೆ ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ನಡುವೆ ರಾಜಕೀಯ ವಾಕ್ಸಮರದ ಜೊತೆಗೆ ಪಕ್ಷಗಳಲ್ಲಿ ಲೋಕಸಭೆ ಚುನಾವಣೆ ತಯಾರಿಯೂ ನಡೆಯುತ್ತಿದೆ.

ತಮಿಳುನಾಡಿಗೆ ನೀರು ಹರಿಸುವಂತೆ ಸುಪ್ರೀಂಕೋರ್ಟ್ ನಿನ್ನೆ(ಸೆ.21) ಆದೇಶ ನೀಡಿದೆ. ಈ ಹಿನ್ನೆಲೆ ಇಂದು ರೈತರು ಹಾಗೂ ಕನ್ನಡಪರ ಸಂಘಟನೆಗಳಿಂದ ಪ್ರತಿಭಟನೆ ನಡೆಯುವ ಸಾಧ್ಯತೆ ಇದೆ. ಹೀಗಾಗಿ ಬೆಂಗಳೂರಿನಾದ್ಯಂತ ಕಟ್ಟೆಚ್ಚರ ವಹಿಸಲು ಪೊಲೀಸ್ ಆಯುಕ್ತ ದಯಾನಂದ್

Leave a Reply

ನಮ್ಮ WhatsApp ಗುಂಪಿಗೆ ಸೇರಲು ಇಲ್ಲಿ ಕ್ಲಿಕ್ ಮಾಡಿ