ಇನ್ಮುಂದೆ ಮಗುವಿಗೆ ಇಷ್ಟು ವರ್ಷತುಂಬಿದ್ರೆ ಮಾತ್ರ 1ನೇ ತರಗತಿಗೆ ಪ್ರವೇಶ! 1ನೇ ತರಗತಿ ಪ್ರವೇಶ ಪಡೆಯುವ ಮಕ್ಕಳ ವಯೋಮಿತಿ ಬದಲಾವಣೆ.

ಬಾಲ್ಯದ ಅರಿವಿಗೆ ಹರಡಿ ವಿದ್ಯಾಭ್ಯಾಸ ಆರಂಭಿಸುವುದು ಎಂದರೆ ಯಾರಾದರೂ ಹೆಮ್ಮೆಯಿಂದ ತೋರಿಸಬಹುದಾದ ಕ್ಷಣ. ಈಗ ಈ ಹೆಮ್ಮೆಯ ಸಂದರ್ಭ ಕೊಂಕಣಿ ಪ್ರವೇಶಿಕೆಯ ಆರಂಭಕ್ಕೆ ಸಂಬಂಧಿಸಿದೆ. ಇದು ಮಗುವಿಗೆ ಒಂದು ವರ್ಷವನ್ನು ಅತ್ಯಂತ ಹೆಚ್ಚು ಶಿಕ್ಷಣದ ರಂಧ್ರದಲ್ಲಿ ಸೇರಿಸಿ ಕೊಟ್ಟು ಬೇರೆ ಸಂಸ್ಥೆಗಳಿಗೆ ಹಲವು ಮೊದಲ ತರಗತಿಗಳಲ್ಲಿ ಪ್ರವೇಶ ಪಡೆಯುವ ಅವಕಾಶವನ್ನು ಕೊಟ್ಟಿದೆ.

Change in the age limit of children taking admission in 1st class
Change in the age limit of children taking admission in 1st class

“2025-26ನೇ ಶೈಕ್ಷಣಿಕ ~ ಸಾಲಿನಿಂದ ಅನ್ವಯವಾಗುವಂತೆ ಜೂನ್ ಒಂದನೇ ತಾರೀಕಿಗೆ 2025-26ನೇ ಪೂರ್ಣಗೊಂಡಿರುವ ಮಗುವನ್ನು ಒಂದನೇ ತರಗತಿಗೆ ದಾಖಲಿಸಲು ವಯೋಮಿತಿಯನ್ನು ನಿಗದಿಪಡಿಸಿ ಆದೇಶಿಸಿದೆ. ಆದೇಶವನ್ನು ಕಳೆದ ವರ್ಷವೇ ಶಿಕ್ಷಣ ಇಲಾಖೆ ಆದೇಶ ಹೊರಡಿಸಿತ್ತು, ಈಗ ಮತ್ತೆ ಪೋಷಕರ ಮಾಹಿತಿಗಾಗಿ ಮತ್ತೊಮ್ಮೆ ಮಾಹಿತಿಯನ್ನು ನಿಮ್ಮೊಂದಿಗೆ ಹಂಚಿಕೊಳ್ಳಲಾಗುತ್ತಿದೆ.

ಹಾಗಾದ್ರೇ ಆದೇಶದಲ್ಲಿ ಇರುವುದು ಏನು ಎನ್ನುವುದನ್ನು ನೋಡುದುವಾದ್ರೆ ಅದರ ವಿವರ ಈ ಕೆಳಕಂಡತಿದೆ.

ಆರ್ ಟಿ ಇ ಕಾಯಿದ 2009 ಮತ್ತು ಕಡ್ಡಾಯ ಶಿಕ್ಷಣ ನಿಯಮಗಳು 2012 ರಂತ 2025-26ನೇ ಶೈಕ್ಷಣಿಕ ಸಾಲಿನಿಂದ ಅನ್ವಯವಾಗುವಂತೆ ಜೂನ್ 1ನೇ ತಾರೀಖಿಗೆ ಕಡ್ಡಾಯವಾಗಿ 6 ವರ್ಷಗಳು ಪೂರ್ಣಗೊಂಡಿರುವ ಮಗುವನ್ನು ಒಂದನೇ ತರಗತಿಗೆ ದಾಖಲಿಸಲು ವಯೋಮಿತಿಯನ್ನು ನಿಗದಿ ಪಡಿಸಿ ಉಲ್ಲೇಖ-2 ರನ್ವಯ ತಿದ್ದುಪಡಿ ಆದೇಶ ಹೊರಡಿಸಿರುತ್ತದೆ. ಅದರಂತೆ ಕ್ರಮವಹಿಸಲು ಇಲಾಖೆಯ ಎಲ್ಲಾ ಸಂಬಂಧಿಸಿದ ಅಧಿಕಾರಿಗಳಿಗೆ ಹಾಗೂ ಶಾಲಾ ಮುಖ್ಯಸ್ಥರಿಗೆ ತಿಳಿಸಲಾಗಿದೆ. ಸರ್ಕಾರದ ಆದೇಶ ಸಂಖ್ಯೆ: ಇಪಿ 260 ಪಿಜಿಸಿ 2021, ದಿನಾಂಕ 26.07.2022ರ ಆದೇಶ ಭಾಗದ 3ನೇ ಸಾಲಿನಲ್ಲಿ “ಶೈಕ್ಷಣಿಕ ವರ್ಷದ ಜೂನ್ ಒಂದನೇ ತಾರೀಖಿಗೆ ಕಡ್ಡಾಯವಾಗಿ 06 ವರ್ಷಗಳು ಪೂರ್ಣಗೊಂಡಿರುವ ಮಗುವನ್ನು ಒಂದನೇ ತರಗತಿಗೆ ದಾಖಲಿಸಲು ವಯೋಮಿತಿಯನ್ನು ನಿಗದಿಪಡಿಸಿ” ಆದೇಶಿಸಿದೆ ಎಂಬುದನ್ನು “2025-26ನೇ ಶೈಕ್ಷಣಿಕ ಸಾಲಿನಿಂದ ಅನ್ವಯವಾಗುವಂತೆ ಜೂನ್ ಒಂದನೇ ತಾರೀಖಿಗೆ ಕಡ್ಡಾಯವಾಗಿ 06 ವರ್ಷಗಳು ಪೂರ್ಣಗೊಂಡಿರುವ ಮಗುವನ್ನು ಒಂದನೇ ತರಗತಿಗೆ ದಾಖಲಿಸಲು ವಯೋಮಿತಿಯನ್ನು ನಿಗದಿಪಡಿಸಿ ಆದೇಶಿಸಿದ ಎಂದು ತಿದ್ದಿ ಓದಿಕೊಳ್ಳತಕ್ಕದ್ದು. ಉಳಿದಂತೆ ಸರ್ಕಾರದ ಆದೇಶ ಸಂಖ್ಯೆ: ಇಪಿ 260 ಪಿಜಿಸಿ 2021, ದಿನಾಂಕ 26.07.2022ರಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ ಅಂತ ಇದೇ ವೇಳೆ ತಿಳಿಸಿದೆ. ಆಯುಕ್ತರು, ಸಾರ್ವಜನಿಕ ಶಿಕ್ಷಣ ಇಲಾಖೆ ಇವರು ದಿನಾಂಕ:18.01.2017ರ ಜ್ಞಾಪನವನ್ನು ಮಾರ್ಪಡಿಸಿ ಶೈಕ್ಷಣಿಕ ವರ್ಷ 2018-19ನೇ ಸಾಲಿನಿಂದ ಸರ್ಕಾರಿ, ಅನುದಾನಿತ, ಅನುದಾನ ರಹಿತ ಶಾಲೆಗಳಲ್ಲಿ 1ನೇ ತರಗತಿಗೆ ನೇರವಾಗಿ ದಾಖಲಾಗುವ ಮಗುವು ಸಂಬಂಧಿಸಿದ ಶೈಕ್ಷಣಿಕ ವರ್ಷದ ಜೂನ್ 1 ರಂದು 5 ವರ್ಷ, 10 ತಿಂಗಳು ಪೂರ್ಣಗೊಂಡಿರಬೇಕೆಂದು ಮೇಲೆ ಓದಲಾದ (3)ರ ಜ್ಞಾಪನದಲ್ಲಿ ನಿಗಧಿಪಡಿಸಲಾಗಿದೆ.

2009ರಲ್ಲಿ ಆರ್.ಟಿ.ಇ. ಕಾಯ್ದೆ ಮತ್ತು 2012 ರಲ್ಲಿ ಕಡ್ಡಾಯ ಶಿಕ್ಷಣ ನಿಯಮಗಳು ಜಾರಿಗೆ ಬಂದಿದ್ದು. ಇವುಗಳು ಕರ್ನಾಟಕ ಶಿಕ್ಷಣ ಕಾಯ 1983 ಮತ್ತು ಅದರಡಿ ರಚಿತವಾದ ಎಲ್ಲಾ ನಿಯಮಗಳನ್ನು | ಆದೇಶಗಳನ್ನು ನಿರಸನಗೊಳಿಸುತ್ತದೆ (Overruled). ಆದ್ದರಿಂದ, ಆರ್.ಟಿ.ಇ. ಕಾಯ್ದೆ 2009 ಮತ್ತು ಕಡ್ಡಾಯ ಶಿಕ್ಷಣ ನಿಯಮಗಳು 2012ರಂತೆ ಪ್ರಾಥಮಿಕ ಶಾಲೆಗೆ ದಾಖಲಿಸಲು ಮಗುವಿನ ಕನಿಷ್ಠ ವಯಸ್ಸನ್ನು ನಿಗಧಿಪಡಿಸುವುದು ಅಗತ್ಯವಾಗಿರುತ್ತದ ಅಂತ ತಿಳಿಸಿದೆ.

Leave a Reply

ನಮ್ಮ WhatsApp ಗುಂಪಿಗೆ ಸೇರಲು ಇಲ್ಲಿ ಕ್ಲಿಕ್ ಮಾಡಿ