Scholarship: ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ : ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಡಿ.31 ಕೊನೆಯ ದಿನ

Scholarship

Scholarship: ವರ್ಷವು ಹತ್ತಿರವಾಗುತ್ತಿದ್ದಂತೆ, ಎಸ್‌ಎಸ್‌ಪಿ (ವಿದ್ಯಾರ್ಥಿ ಯಶಸ್ಸಿನ ಕಾರ್ಯಕ್ರಮ) ವಿದ್ಯಾರ್ಥಿವೇತನದ ರೂಪದಲ್ಲಿ ಯುವ ವಿದ್ವಾಂಸರಿಗೆ ನಂಬಲಾಗದ ಅವಕಾಶ ಕಾಯುತ್ತಿದೆ. ಡಿಸೆಂಬರ್ 31 ಕ್ಕೆ ಕೆಲವೇ ದಿನಗಳು ಉಳಿದಿವೆ, ಪೋಷಕರು ಮತ್ತು ಪೋಷಕರು ತಮ್ಮ 1 ರಿಂದ 8 ನೇ ತರಗತಿಯ ವಿದ್ಯಾರ್ಥಿಗಳಿಗೆ ಉಜ್ವಲ ಭವಿಷ್ಯವನ್ನು ಭದ್ರಪಡಿಸಿಕೊಳ್ಳಲು ಈ ಅವಕಾಶವನ್ನು ಪಡೆದುಕೊಳ್ಳಲು ಪ್ರೋತ್ಸಾಹಿಸಲಾಗುತ್ತದೆ.

December 31 is the last day to apply for SSP scholarship for 1st to 8th students
December 31 is the last day to apply for SSP scholarship for 1st to 8th students

ರಾಜ್ಯದ 1 ನೇ ತರಗತಿಯಿಂದ 8ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತರ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ ಮತ್ತು ಪಾರ್ಸಿ ಸಮುದಾಯದ ಅರ್ಹ ವಿದ್ಯಾರ್ಥಿಗಳಿಂದ 2023-24 ನೇ ಸಾಲಿಗೆ ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶ (ಎಸ್‌ಎಸ್ಪಿ) ದಲ್ಲಿ ಮೆಟ್ರಿಕ್ ಪೂರ್ವ ವಿದ್ಯಾರ್ಥಿಗಳಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸಲು ಡಿ.31 ಕೊನೆಯ ದಿನಾಂಕವಾಗಿದೆ.

ಎನ್‌ಎಸ್ಪಿ ಯಲ್ಲಿ ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳು ವಿದ್ಯಾರ್ಥಿವೇತನ ಪಡೆಯಲು ಎಸ್‌ಎಸ್ಪಿ ಪೋರ್ಟಲ್ https://ssp.prematric.karnataka.gov.in ಅಡಿಯಲ್ಲಿ ಅರ್ಜಿ ಸಲ್ಲಿಸುವುದು(ಪ್ರೆಶ್) ನಲ್ಲಿ ಕಡ್ಡಾಯವಾಗಿದ್ದು, ಅರ್ಜಿ ಸಲ್ಲಿಸಲು ಡಿಸೆಂಬರ್, 31 ಕೊನೆಯ ದಿನವಾಗಿದೆ.

ಹೆಚ್ಚಿನ ಮಾಹಿತಿಗೆ ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶದಲ್ಲಿ (ಎಸ್‌ಎಸ್ಪಿ) ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವೆಬ್ಸೈಟ್ https://dom.karnataka.gov.in/kodagu/public ಅಥವಾ ಸಹಾಯವಾಣಿ ಸಂಖ್ಯೆ 8277799990 ಗೆ ಅಥವಾ ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ, ಮೌಲಾನಾ ಆಜಾದ್ ಭವನ, ಎಫ್‌ಎಂಸಿ ಕಾಲೇಜು ಹತ್ತಿರ, ಮಡಿಕೇರಿ ಇವರನ್ನು ಹಾಗೂ ಕಚೇರಿ ದೂ.ಸಂ.08272-225528, ಮಾಹಿತಿ ಕೇಂದ್ರ, ಮಡಿಕೇರಿ 08272-220214, ಮಾಹಿತಿ ಕೇಂದ್ರ, ಸೋಮವಾರಪೇಟೆ 8548068519, ಮಾಹಿತಿ ಕೇಂದ್ರ, ಪೊನ್ನಂಪೇಟೆ 9900731037 ನ್ನು ಸಂಪರ್ಕಿಸಬಹುದು.

Leave a Reply

ನಮ್ಮ WhatsApp ಗುಂಪಿಗೆ ಸೇರಲು ಇಲ್ಲಿ ಕ್ಲಿಕ್ ಮಾಡಿ