Hello ಸ್ನೇಹಿತರೇ, ಗೃಹ ಲಕ್ಷ್ಮಿ ಯೋಜನೆಗೆ ನೋಂದಾಯಿತ ಫಲಾನುಭವಿಗಳ ಖಾತೆಗೆ ರೂ.2000 ಜಮಾಗೊಳಿಸುವ ಪ್ರಕ್ರಿಯೆಯಲ್ಲಿ ಗೊಂದಲವಾಗದಿರಲೆಂದು, ನೋಂದಣಿಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದ್ದು, ಶೀಘ್ರವೇ ನೋಂದಣಿ ಪುನರಾರಂಭಗೊಳ್ಳಲಿದೆ ಅಂತ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಟ್ವಿಟರ್‌ನಲ್ಲಿ ಹೇಳಿಕೆಯಲ್ಲಿ ತಿಳಿಸಿದೆ.

ಮೈಸೂರು ಮಹಾರಾಜ ಕಾಲೇಜು ಮೈದಾನದಲ್ಲಿ ನಡೆದ ರಾಜ್ಯ ಸರ್ಕಾರದ ಚಾರಿತ್ರಿಕ ಗೃಹಲಕ್ಷ್ಮಿ ಯೋಜನೆಗೆ ಚಾಲನೆ ನೀಡಲಾಗಿದೆ. ಈ ನಡುವೆ ಗೃಹಲಕ್ಷ್ಮೀ ಯೋಜನೆಯ ಫಲಾನುಭವಿಗಳು ಯಾವುದೇ ಮಧ್ಯವರ್ತಿಗಳ ಆಮಿಷಕ್ಕೆ ಒಳಗಾಗದೇ ಉಚಿತವಾಗಿ ನೋಂದಣಿ ಮಾಡಿಕೊಳ್ಳಬಹುದಾಗಿದೆ. ಈ ಯೋಜನೆಯ ಸೌಲಭ್ಯವನ್ನು ಪಡೆಯಲು ಕರ್ನಾಟಕ ಒನ್, ಬೆಂಗಳೂರು ಒನ್, ಗ್ರಾಮ ಒನ್ ಹಾಗೂ ಬಾಪೂಜಿ ಕೇಂದ್ರಗಳಲ್ಲಿ ಉಚಿತವಾಗಿ ನೋಂದಾಯಿಸಿಕೊಳ್ಳಬಹುದು ಅಥವಾ ಸ್ವಯಂಸೇವಕ ‘ಪ್ರಜಾಪ್ರತಿನಿಧಿಗಳು’ ಮನೆ ಮನೆಗೆ ತೆರಳಿ ಉಚಿತವಾಗಿ ನೋಂದಣಿ ಮಾಡುತ್ತಾರೆ.
ಇನ್ನು ಓದಿ: ಸ್ವಂತ ಭೂಮಿ ಹೊಂದಿರುವ ಎಲ್ಲಾ ರೈತರಿಗೆ ಪ್ರತಿ ತಿಂಗಳು 3000 ರೂ ಪಿಂಚಣಿ, ಕೇಂದ್ರದ ಹೊಸ ಯೋಜನೆ ಜಾರಿಗೆ. ಕಿಸಾನ್ ಮಂಧನ್ ಯೋಜನೆ
ಶೀಘ್ರವೇ ಗೃಹಲಕ್ಷ್ಮೀ ಯೋಜನೆಗೆ ನೋಂದಣಿಯನ್ನು ಪ್ರಾರಂಭ
ರಾಜ್ಯದ ಯಜಮಾನಿ ಮಹಿಳೆಯರು ಯಾವುದೇ ಗೊಂದಲಕ್ಕೆ ಒಳಗಾಗ ಬಾರದು. ಸದ್ಯಕ್ಕೆ ತಾತ್ಕಾಲಿಕವಾಗಿ ಗೃಹಲಕ್ಷ್ಮೀ ಯೋಜನೆ ನೋಂದಣಿಯನ್ನು ನಿಲ್ಲಿಸಲಾಗಿದೆ. ಶೀಘ್ರವೇ ಗೃಹಲಕ್ಷ್ಮೀ ಯೋಜನೆಗೆ ನೋಂದಣಿಯನ್ನು ಪ್ರಾರಂಭಿಸಲಾಗುತ್ತದೆ ಎಂಬುದಾಗಿ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ.
ನಗರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯು ಗೃಹಲಕ್ಷ್ಮೀ ಯೋಜನೆಗೆ ನೋಂದಣಿ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂದರು.
ಈಗಾಗಲೇ 2 ಸಾವಿರ ರೂ. ಜಮೆ ಮಾಡುವ ಪ್ರಕ್ರಿಯೆ ಜಾರಿ
ಈಗಾಗಲೇ 2 ಸಾವಿರ ರೂ. ಜಮೆ ಮಾಡುವ ಪ್ರಕ್ರಿಯೆ ಜಾರಿಯಲ್ಲಿದೆ. ಗೊಂದಲವಾಗದಿರಲಿ ಎಂದು ರಾಜ್ಯ ಸರ್ಕಾರ ನೋಂದಣಿ ಪ್ರಕ್ರಿಯೆ ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ. ನೋಂದಾಯಿತ ಫಲಾನುಭವಿಗಳಿಗೆ 2 ಸಾವಿರ ರೂ. ಜಮೆ ಆದ ನಂತರ ಗೃಹಲಕ್ಷ್ಮೀ ಯೋಜನೆಗೆ ನೋಂದಣಿ ಪ್ರಕ್ರಿಯೆ ಪುನಾರಂಭಗೊಳ್ಳಲಿದೆ ಎಂದು ಹೇಳಿದರು.