ಗೃಹಲಕ್ಷ್ಮಿ ಯೋಜನೆಯ ಹಣ ಇನ್ನೂ ಎಷ್ಟು ಮಂದಿಗೆ ಸಿಕ್ಕಿಲ್ಲ, ಕಾರಣವೇನು? ಹೆಬ್ಬಾಳ್ಕರ್ ಸ್ಪಷ್ಟನೆ.

gruha lakshmi yojana amount deposit status in kannada
gruha lakshmi yojana amount deposit status in kannada

ಲಕ್ಷಾಂತರ ಮಹಿಳೆಯರ ಬ್ಯಾಂಕ್‌ ಖಾತೆಗೆ ಇನ್ನೂ ಗೃಹಲಕ್ಷ್ಮಿ ಯೋಜನೆ ಹಣ ಹೋಗಿಲ್ಲ. ಹೀಗಾಗಿ ಯಾಕೆ ಹಣ ತಲುಪಿಲ್ಲ ಎಂಬುವುದರ ಬಗ್ಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ಅವರು ಸ್ಪಷ್ಟನೆ ನೀಡಿದ್ದಾರೆ.

ಅರ್ಹ ಫಲಾನುಭವಿಗಳಿಗೆ ಮಾಸಿಕ 2,000 ರೂಪಾಯಿ ವಿತರಿಸುವ ಕರ್ನಾಟಕ ರಾಜ್ಯ ಕಾಂಗ್ರೆಸ್ ಸರ್ಕಾರದ ‘ಗೃಹ ಲಕ್ಷ್ಮೀ’ ಯೋಜನೆಯು ಎರಡೇ ತಿಂಗಳಿಗೆ ಸ್ಥಗಿತಗೊಂಡಿದೆ ಎಂದು ರಾಜ್ಯ ಬಿಜೆಪಿ ಆರೋಪಿಸಿದೆ. ರಾಜ್ಯ ಸರ್ಕಾರದ ವಿರುದ್ಧ ಯೋಜನೆ ವಿಚಾರವಾಗಿ ಹರಿಹಾಯ್ದಿದೆ.

ಗೃಹಲಕ್ಷ್ಮೀ ಯೋಜನೆ ಕುರಿತು ಬಿಜೆಪಿ ಮಂಗಳವಾರ ಟ್ವೀಟ್ ಮಾಡಿದೆ. ಸರ್ಕಾರಿ ಹಣ ಖರ್ಚು ಮಾಡಿ ವೈಭವದ ಪ್ರಚಾರದಿಂದ ಆರಂಭವಾದ ಗೃಹಲಕ್ಷ್ಮಿ ಯೋಜನೆ ಎರಡೇ ತಿಂಗಳಿಗೆ ಸ್ಥಗಿತಗೊಂಡಿರುವುದು ನುಡಿದಂತೆ ನಡೆಯಲಾರದ ಕರ್ನಾಟಕ ಸರ್ಕಾರದ ವಾಸ್ತವ ಅನಾವರಣಗೊಂಡಿದೆ ಎಂದು ಟೀಕಿಸಿದೆ.

ಮಹಿಳೆಯರಿಗೆ ಬೆಲೆ ಏರಿಕೆ ಹೊರೆ ಕಡಿಮೆ ಮಾಡಲು ಮಾಸಿಕವಾಗಿ 2000 ರೂಪಾಯಿಯನ್ನು ಮಹಿಳೆಯರಿಗೆ ನೀಡುವಾದಿ ಸಿಎಂ ಸಿದ್ದರಾಮಯ್ಯ ಅವರು ಹೇಳಿದ್ದರು. ಇದೀಗ ಸರ್ಕಾರದಿಂದ ಗೃಹಲಕ್ಷ್ಮಿ ಯೋಜನೆಯಡಿ ಮಾಸಿಕ ₹2,000 ಮೋಸದ ಜತೆಗೆ ಬೆಲೆ ಏರಿಕೆಯೂ ಉಚಿತ ಎಂದು ಬಿಜೆಪಿ ಲೇವಡಿ ಮಾಡಿದೆ.

ಗೃಹ ಲಕ್ಷ್ಮಿ ಯೋಜನೆಯ ಮಾಸಿಕ ಹಣಕ್ಕಾಗಿ ಸಲ್ಲಿಕೆಯಾಗಿದ್ದ ಅರ್ಜಿಗಳನ್ನು ಸಲ್ಲಿಸಿ ನೋಂದಾಯಿಸಿಕೊಂಡಿದ್ದ ಮಹಿಳೆಯರ ಪೈಕಿ 9 ಲಕ್ಷ ಅಧಿಕ ಮಹಿಳೆಯರಿಗೆ ಹಣ ಹೋಗಿಲ್ಲ ಎನ್ನಲಾಗಿದೆ. ಈ ಕುರಿತು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಹಣ ವಿತರಣೆಗೆ ಆದ ಅಡ್ಡಿ ಬಗ್ಗೆ ಅವರು ಸ್ಪಷ್ಟನೆ ನೀಡಿದ್ದಾರೆ. ಆದರೆ ಈ ವಿಚಾರವಾಗಿ ರಾಜ್ಯ ಬಿಜೆಪಿ ಸಿಎಂ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರದ ವಿರುದ್ಧ ಕಿಡಿ ಕಾರಿದೆ. ನುಡಿದಂತೆ ನಡೆದಿಲ್ಲ ಎಂದು ದೂರಿದೆ.

ಹಣ ಜಮೆ ಆಗಿಲ್ಲ: ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದೇನು?

ರಾಜ್ಯದ ಮಹಿಳೆಯರ ಆರ್ಥಿಕ ಸಬಲೀಕರಣ ಹೆಚ್ಚಿಸಲು ಕುಟುಂಬದ ಯಜಮಾನಿಗೆ ಮಾಸಿಕ 2 ಸಾವಿರ ರೂ. ನೀಡುವ ರಾಜ್ಯ ಸರಕಾರದ ಮಹತ್ವಾಕಾಂಕ್ಷಿ ಯೋಜನೆ ಗೃಹಲಕ್ಷ್ಮಿ ಅಡಿ ಈವರೆಗೆ 9,44,155 ಅರ್ಜಿದಾರರಿಗೆ ಹಣ ಹೋಗಿಲ್ಲ. ಇದಕ್ಕೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳಕರ ಅವರು ಸೂಕ್ತ ಕಾರಣಗಳನ್ನು ನೀಡಿದ್ದಾರೆ.

Join Telegram Group Join Now
WhatsApp Group Join Now

ಒಟ್ಟು ನೋಂದಾಯಿತ ಮಹಿಳೆಯರ ಪೈಕಿ 3,082 ಅರ್ಜಿದಾರರು ಸಾವನ್ನಪ್ಪಿದ್ದಾರೆ. ಹೀಗಾಗಿ ಅವರನ್ನು ಅನರ್ಹಗೊಳಿಸಲಾಗಿದೆ. ಇನ್ಣೂ 1,59,356 ಅರ್ಜಿದಾರರ ಡೆಮೋ ದೃಢೀಕರಣ ಸಾಧ್ಯವಾಗಿಲ್ಲ. ಫಲಾನುಭವಿಗಳ ಆಧಾರ್ ಹಾಗೂ ಬ್ಯಾಂಕ್ ಖಾತೆ ಹೆಸರಿನಲ್ಲಿ ವ್ಯತ್ಯಾಸಗಳು ಕಂಡು ಬಂದ ಹಿನ್ನೆಲೆ ಮೊದಲು ಅವುಗಳನ್ನು ಸರಿಪಡಿಸಲಾಗುತ್ತದೆ.

ಖಾತೆ-ಆಧಾರ್ ಜೋಡಣೆಗೆ ಕ್ರಮ

ಯೋಜನೆಯಡಿ ನೋಂದಾಯಿತರ ಪೈಕಿ 5,96,268 ಫಲಾನುಭವಿಗಳ ಖಾತೆ ಜೊತೆ ಆಧಾರ್ ಜೋಡಣೆ ಆಗಿಲ್ಲ. 2,17,536 ಫಲಾನುಭವಿಗಳ ಬ್ಯಾಂಕ್ ಖಾತೆ ಆಧಾರ್ ನೊಂದಿಗೆ ಯಶಸ್ವಿಯಾಗಿ ಜೋಡಿಸಲಾಗಿದೆ. ಉಳಿದ ಫಲಾನುಭವಿಗಳಿಗೂ ಸಿಡಿಪಿಒ ಮಾಹಿತಿ ನೀಡಿ ಆಧಾರ್ ಫೀಡ್ ಮಾಡಿಸಲು ಕ್ರಮ ವಹಿಸಲಾಗಿದೆ ಎಂದು ಸಚಿವೆ ತಿಳಿಸಿದ್ದಾರೆ.

ಒಟ್ಟು 1.8 ಕೋಟಿ ಅರ್ಹ ಫಲಾನುಭವಿಗಳಿಗೆ ರಾಜ್ಯ ಸರ್ಕಾರ 2,169 ಕೋಟಿ ರೂಪಾಯಿ ಅನುದಾನ ಬಿಡುಗಡೆ ಮಾಡಿತ್ತು. ಸೆಪ್ಟಂಬರ್ ತಿಂಗಳಲ್ಲಿ 1.14 ಲಕ್ಷ ಅರ್ಹ ಮಹಿಳೆಯರಿಗೆ 2,280 ಕೋಟಿ ರೂಪಾಯಿ ಬಿಡುಗಡೆಗೊಳಿಸಿದ್ದೇವೆ.

ಅಕ್ಟೋಬರ್ 4 ರವರೆಗೆ 93 ಲಕ್ಷ ಫಲಾನುಭವಿಗಳ ಬ್ಯಾಂಕ್ ಖಾತೆಗೆ ತಲಾ 2,000 ಸಾವಿರ ರೂ. ಯಶಸ್ವಿಯಾಗಿ ವರ್ಗಾಯಿಸಲಾಗಿದೆ. ಅದೇ ರೀತಿ 5.5 ಲಕ್ಷ

Leave a Reply

ನಮ್ಮ WhatsApp ಗುಂಪಿಗೆ ಸೇರಲು ಇಲ್ಲಿ ಕ್ಲಿಕ್ ಮಾಡಿ