‘ಗೃಹಲಕ್ಷ್ಮಿ’ಯರಿಗೆ ‘ನವರಾತ್ರಿ’ ಗಿಫ್ಟ್ : ಆಗಸ್ಟ್ , ಸೆಪ್ಟೆಂಬರ್ ತಿಂಗಳ 4 ಸಾವಿರ ಹಣ ಒಟ್ಟಿಗೆ ಜಮಾ..!

ಗೃಹಲಕ್ಷ್ಮಿಯರಿಗೆ ‘ನವರಾತ್ರಿ’ ಹಬ್ಬಕ್ಕೆ ಬಂಪರ್ ಗಿಫ್ಟ್ ಸಿಕ್ಕಂತಾಗಿದ್ದು, ಆಗಸ್ಟ್ , ಸೆಪ್ಟೆಂಬರ್ ತಿಂಗಳ 4 ಸಾವಿರ ಹಣ ಒಟ್ಟಿಗೆ ಜಮಾ ಆಗಲಿದೆ ಎಂದು ಹೇಳಲಾಗಿದೆ.

Gruhalakshmi 4 thousand money is deposited together for the months of August and September.
Gruhalakshmi 4 thousand money is deposited together for the months of August and September.

ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾದ ಗೃಹಲಕ್ಷ್ಮೀ ಯೋಜನೆಗೆ ಈಗಾಗಲೇ ಚಾಲನೆ ನೀಡಲಾಗಿದ್ದು, ಹಲವು ಫಲಾನುಭವಿಗಳ ಖಾತೆಗೆ 2,000 ರೂ.

ಹಣ ವರ್ಗಾವಣೆ ಮಾಡಲಾಗಿದೆ. ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಿ ಇನ್ನೂ 2 ತಿಂಗಳ ಹಣ ಬಂದಿಲ್ಲಾ ಎಂದು ಚಿಂತೆಗೀಡಾದವರಿಗೆ ಸಿಎಂ ಸಿದ್ದರಾಮಯ್ಯ ಗುಡ್ ನ್ಯೂಸ್ ನೀಡಿದ್ದಾರೆ.

“ನವಶಕ್ತಿ ಸಂಭ್ರಮ”

ಕುಟುಂಬ ನಿರ್ವಹಣೆಯ ಹೊಣೆಹೊತ್ತ ಮನೆಯ ಯಜಮಾನಿಯರು ನಿತ್ಯ ಎದುರಿಸುವ ಸವಾಲುಗಳಿಗೆ ಶಾಶ್ವತ ಪರಿಹಾರ ಕಲ್ಪಿಸಬೇಕೆಂಬ ಉದ್ದೇಶದಿಂದ ನಮ್ಮ ಸರ್ಕಾರವು ಗೃಹಲಕ್ಷ್ಮಿ ಯೋಜನೆಯನ್ನು ಜಾರಿಗೆ ತಂದಿದೆ. ಈ ಯೋಜನೆಯಡಿ ಪ್ರತಿ ಕುಟುಂಬದ ಯಜಮಾನಿಗೆ ಮಾಸಿಕ ರೂ. 2,000 ಧನಸಹಾಯ ನೀಡಲಾಗುತ್ತಿದೆ. ರಾಜ್ಯದ 1.08 ಕೋಟಿ ಮಹಿಳೆಯರಿಗೆ ಈಗಾಗಲೇ ಎರಡು ತಿಂಗಳ ಹಣ ಜಮೆಯಾಗಿದ್ದು, ಈ ಉದ್ದೇಶಕ್ಕಾಗಿ ಸರ್ಕಾರವು ರೂ. 4,449 ಕೋಟಿ ಅನುದಾನ ಬಳಕೆ ಮಾಡಿದೆ. ಸ್ತ್ರೀಶಕ್ತಿ ಆರಾಧನೆಯ ಈ ನವರಾತ್ರಿ ಹಬ್ಬದ ಸಂದರ್ಭದಲ್ಲಿ ನಮ್ಮ ಸರ್ಕಾರವು ಸ್ತ್ರೀಸಬಲೀಕರಣಕ್ಕೆ ಬದ್ಧವಾಗಿ ಶ್ರಮಿಸುತ್ತಿದೆ ಎಂದು ಹೆಮ್ಮೆಯಿಂದ ಹೇಳಬಯಸುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಎಕ್ಸ್ ನಲ್ಲಿ ಟ್ವೀಟ್ ಮಾಡಿದ್ದಾರೆ.

ನಿಮ್ಮ ರೇಷನ್ ಕಾರ್ಡ್ ಗೆ KYC ಅಪ್ಡೇಟ್ ಆಗಿದೆಯೇ ಎನ್ನುವುದನ್ನು ತಿಳಿದುಕೊಳ್ಳಿ. ಆಗದೇ ಇದ್ದಲ್ಲಿ ಕೂಡಲೇ ಹತ್ತಿರದ ನ್ಯಾಯಬೆಲೆ ಅಂಗಡಿಗೆ ಹೋಗುವ ಮೂಲಕ KYC ಅಪ್ಡೇಟ್ ಮಾಡಿಸಿಕೊಳ್ಳಿ.ಗೃಹಲಕ್ಷ್ಮಿ ಯೋಜನೆಗೆ ಅರ್ಜಿಯನ್ನು ಸಲ್ಲಿಸಿಕೊಂಡಿರುವ ಫಲಾನುಭವಿಗಳಲ್ಲಿ ಯಾರಿಗೆ ಮೊದಲ ಕಂತಿನ ಹಣ ಬಂದಿಲ್ಲ ಅಂತಹವರು ತಮ್ಮ ಬ್ಯಾಂಕ್ಗಳಲ್ಲಿ ಇ-ಕೆವೈಸಿ ಹಾಗೂ ಆಧಾರ್ ಜೋಡಣೆ ಮಾಡಿಕೊಂಡರೆ ಯೋಜನೆ ಹಣ ಜಮಾ ಆಗಲಿದೆ.

Join Telegram Group Join Now
WhatsApp Group Join Now

Leave a Reply

ನಮ್ಮ WhatsApp ಗುಂಪಿಗೆ ಸೇರಲು ಇಲ್ಲಿ ಕ್ಲಿಕ್ ಮಾಡಿ