Breaking News.! ‘ಗೃಹಲಕ್ಷ್ಮಿ’ ಯೋಜನೆಗೆ ಅಧಿಕೃತ ಚಾಲನೆ ನೀಡಿದ ‘ರಾಹುಲ್ ಗಾಂಧಿ’ : ಇಂದಿನಿಂದಲೇ ಯಜಮಾನಿಯರ ಖಾತೆಗೆ 2 ಸಾವಿರ

ರಾಜ್ಯ ಸರ್ಕಾರದ 4 ನೇ ಗ್ಯಾರಂಟಿಗಳಲ್ಲಿ ಒಂದಾದ ಮಹಿಳೆಯರಿಗೆ 2000 ರೂ ನೀಡುವ ‘ಗೃಹಲಕ್ಷ್ಮಿ’ ಯೋಜನೆಗೆ ಡಿಜಿಟಲ್ ಬಟನ್ ಒತ್ತುವ ಮೂಲಕ ಚಾಲನೆ ನೀಡಲಾಯಿತು. ಈ ಮೂಲಕ ಮೈಸೂರಿನಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಇಂದು ಅಧಿಕೃತವಾಗಿ ಚಾಲನೆ ನೀಡಿದರು.

gruhalakshmi yojana amount check

ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ವರಿಷ್ಠ ರಾಹುಲ್ ಗಾಂಧಿ ಗೃಹಲಕ್ಷ್ಮಿ’ ಯೋಜನೆಗೆ ಅಧಿಕೃತವಾಗಿ ಚಾಲನೆ ನೀಡಿದರು. ಈ ಮೂಲಕ ಯಜಮಾನಿಯರಿಗೆ ಭರ್ಜರಿ ಗುಡ್ ನ್ಯೂಸ್ ಸಿಕ್ಕಿದ್ದು, ಇಂದಿನಿಂದಲೇ ಪ್ರತಿ ತಿಂಗಳು 2000 ಹಣ ಮನೆ ಯಜಮಾನಿಯರ ಖಾತೆಗೆ ವರ್ಗಾವಣೆಯಾಗಲಿದೆ.

ಕಾರ್ಯಕ್ರಮದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿಎಂ ಸಿದ್ದರಾಮಯ್ಯ ಡಿಸಿಎಂ ಡಿ.ಕೆ. ಶಿವಕುಮಾರ್, ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸೇರಿದಂತೆ ಹಲವು ಸಚಿವರು ಪಾಲ್ಗೊಂಡಿದ್ದರು. ಕಾರ್ಯಕ್ರಮ ವೀಕ್ಷಿಸಲು ಸಾವಿರಾರು ಸಂಖ್ಯೆಯಲ್ಲಿ ಮಹಿಳೆಯರು ಆಗಮಿಸಿದ್ದರು. ಈ ಹಿನ್ನೆಲೆ ಮಹಾರಾಜ ಕಾಲೇಜು ಮೈದಾನದ ಸುತ್ತಮುತ್ತಾ ರಸ್ತೆಯಲ್ಲಿ ವಾಹನ ಸಂಚಾರಕ್ಕೆ ನಿರ್ಬಂಧ ಹೇರಲಾಗಿತ್ತು.

ಗೃಹಲಕ್ಷ್ಮೀ ಯೋಜನೆ ಫಲಾನುಭವಿಗಳ ಪಟ್ಟಿಯನ್ನು ನೀವು ಈ ರೀತಿಯಾಗಿ ಚೆಕ್ ಮಾಡಬಹುದು.

ಮೊದಲು https://ahara.kar.nic.in/Home/EServices ವೆಬ್ ಸೈಟ್ ಭೇಟಿ ಕೊಡಿ. ನಂತರ ಇ ಪಡಿತರ ಚೀಟಿ ಮೇಲೆ ಕ್ಲಿಕ್ ಮಾಡಬೇಕು. ಅಲ್ಲಿ ನಿಮ್ಮ ಜಿಲ್ಲೆ, ತಾಲೂಕು, ಗ್ರಾಮ ಪಂಚಾಯತ್ ಹಾಗೂ ನಿಮ್ಮ ಊರು ಆಯ್ಕೆ ಮಾಡಿಕೊಳ್ಳಬೇಕು. ನಂತರ ಗೋ ಮೇಲೆ ಕ್ಲಿಕ್ ಮಾಡಿ..ಬಳಿಕ ಇನ್ನೊಂದು ಪೇಜ್ ಓಪನ್ ಆಗುತ್ತದೆ..ಅಲ್ಲಿ ನಿಮ್ಮ ಆರ್ ಸಿ ನಂಬರ್, ವಿಳಾಸ, ರೇಷನ್ ಕಾರ್ಡ್ ಬಗ್ಗೆ ಮಾಹಿತಿ ಬರುತ್ತದೆ. ಆರ್ ಸಿ ನಂಬರ್ ಬಳಿಕ ಮಹಿಳೆಯರ ಹೆಸರಿದ್ದರೆ ಮಾತ್ರ ಅವರನ್ನು ಕುಟುಂಬದ ಮುಖ್ಯಸ್ಥರೆಂದು ಪರಿಗಣಿಸಲಾಗುತ್ತದೆ. ಇಲ್ಲಿ ಮಹಿಳೆಯರ ಹೆಸರಿದ್ದವರು ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಸಿದ್ದರೆ 2 ಸಾವಿರ ಜಮಾ ಮಾಡಲಾಗುತ್ತದೆ.

Leave a Reply

ನಮ್ಮ WhatsApp ಗುಂಪಿಗೆ ಸೇರಲು ಇಲ್ಲಿ ಕ್ಲಿಕ್ ಮಾಡಿ