ಕರ್ನಾಟಕ ಸರ್ಕಾರದ ಸಾಲ,ಸಬ್ಸಿಡಿ 2023 | Karnataka Government Loan and Subsidy 2023

Karnataka Government Loan and Subsidy 2023

ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ನಿಯಮಿತದ ಅಡಿಯಲ್ಲಿವಿವಿಧ ಯೋಜನೆಗಳು (2022-23)

 • ಶ್ರಮಶಕ್ತಿ ಸಾಲ ಯೋಜನೆ | Shram Shakti Loan Scheme
 • ಸ್ವಯಂ ಉದ್ಯೋಗ ಯೋಜನೆ | Self Employment Scheme
 • ಅರಿವು ವಿದ್ಯಾಭ್ಯಾಸ ಸಾಲ ಯೋಜನೆ | Awareness Education Loan Scheme
 • ವ್ಯಾಪಾರ/ಉದ್ಯಮಗಳಿಗೆ ನೇರ ಸಾಲ ಯೋಜನೆ | Direct Loan Scheme for Business/Industries
 • ಗಂಗಾ ಕಲ್ಯಾಣ ಯೋಜನೆ | Ganga Welfare Scheme
 • ಆಟೋ ರಿಕ್ಷಾ /ಟ್ಯಾಕ್ಸಿ /ಸರಕು ವಾಹನಗಳ ಖರೀದಿಗೆ ಸಹಾಯಧನ | Subsidy on purchase of auto rickshaw/taxi/goods vehicles
ಶ್ರಮಶಕ್ತಿ ಸಾಲ ಯೋಜನೆ | Shram Shakti Loan Scheme

ಈ ಯೋಜನೆಯಡಿಯಲ್ಲಿ ಅಲ್ಪಸಂಖ್ಯಾತ ವರ್ಗದ ಕುಲಕಸುಬುದಾರರಿಗೆ ತರಬೇತಿ ನೀಡಿ, ಅವರು ತಮ್ಮ ಕಲಾತ್ಮಕ ಮತ್ತು ತಾಂತ್ರಿಕ ಕೌಶಲ್ಯವನ್ನು ವೃದ್ಧಿಸಿಕೊಂಡು ಅದೇ ಕಸುಬನ್ನು ಮುಂದುವರೆಸಲು ಅಥವಾ ಸಣ್ಣ ವ್ಯಾಪಾರವನ್ನು ಪ್ರಾರಂಭಿಸಲು ಅಥವಾ ಅಭಿವೃದ್ಧಿಗೊಳಿಸುವ ಸಲುವಾಗಿ, ನಿಗಮದಿಂದ ಶೇ. 4 ರ ಬಡ್ಡಿದರದಲ್ಲಿ ರೂ. 50,000/-ದವರೆಗೆ ಸಾಲಸೌಲಭ್ಯವನ್ನು ಕಲ್ಪಿಸಲಾಗುತ್ತದೆ. ಇದರಲ್ಲಿ, ಶೇ. 50ರಷ್ಟು ಸಾಲವನ್ನು 36 ತಿಂಗಳಿನಲ್ಲಿ ಫಲಾನುಭವಿಯು ಮರುಪಾವತಿ ಮಾಡಿದಲ್ಲಿ, ಉಳಿದ ಶೇ. 50ರಷ್ಟು ಹಣವನ್ನು ‘ಬ್ಯಾಕ್‌ಎಂಡ್ ಸಹಾಯಧನ’ವನ್ನಾಗಿ ಪರಿಗಣಿಸಲಾಗುತ್ತದೆ. ಫಲಾನುಭವಿಯು ತಾನು ಪಡೆದ ಸಾಲವನ್ನು 36 ತಿಂಗಳೊಳಗಾಗಿ ಮರುಪಾವತಿ ಮಾಡಲು ವಿಫಲರಾದಲ್ಲಿ ಶೇ. 50ರಷ್ಟು ಬ್ಯಾಕ್‌ಎಂಡ್ ಸಹಾಯಧನವನ್ನು ಸಹ ಸಾಲವೆಂದು ಪರಿಗಣಿಸಲಾಗುತ್ತದೆ.

ಶ್ರಮ ಶಕ್ತಿ ಸಾಲ ಯೋಜನೆ ಅರ್ಹತೆ | Shram Shakti Loan Scheme Eligibility
 1. ಅರ್ಜಿದಾರರು ಸರ್ಕಾರಿ ಆದೇಶದಲ್ಲಿ ವಿವರಿಸಿದಂತೆ ಧಾರ್ಮಿಕ ಅಲ್ಪಸಂಖ್ಯಾತರ ಸಮುದಾಯಕ್ಕೆ ಸೇರಿದವರಾಗಿರಬೇಕು.
 2. ಅರ್ಜಿದಾರರು ಕರ್ನಾಟಕದ ಖಾಯಂ ನಿವಾಸಿಯಾಗಿರಬೇಕು.
 3. ಅರ್ಜಿದಾರರ ವಯಸ್ಸು 18 ರಿಂದ 55 ವರ್ಷಗಳ ನಡುವೆ ಇರಬೇಕು.
 4. ಎಲ್ಲಾ ಮೂಲಗಳಿಂದ ಕುಟುಂಬದ ವಾರ್ಷಿಕ ಆದಾಯ ರೂ. 3,50,000/- ಗಿಂತ ಕಡಿಮೆ ಇರಬೇಕು.
 5. ಅರ್ಜಿದಾರರ ಕುಟುಂಬದ ಯಾವುದೇ ಸದಸ್ಯರು ಕೇಂದ್ರ/ರಾಜ್ಯ ಸರ್ಕಾರಿ ನೌಕರರಾಗಿರಬಾರದು.
 6. ಕಳೆದ 05 ವರ್ಷಗಳಲ್ಲಿ ಅರ್ಜಿದಾರ ಅಥವಾ ಅವನ/ಅವಳ ಕುಟುಂಬದ ಸದಸ್ಯರು ಸರ್ಕಾರದ / ನಿಗಮದ ಯಾವುದೇ ಇತರ ಯೋಜನೆಯಡಿಯಲ್ಲಿ(ಅರಿವು ಯೋಜನೆ ಹೊರತುಪಡಿಸಿ) ಸಾಲ ಸೌಲಭ್ಯಗಳನ್ನು ಪಡೆದಿರಬಾರದು.
ಶ್ರಮ ಶಕ್ತಿ ಸಾಲ ಯೋಜನೆಗೆ ಅಗತ್ಯ ದಾಖಲೆಗಳು | Shram Shakti Loan Scheme required ducuments | 

ಯೋಜನಾ ವರದಿ

ಸಕ್ಷಮ ಪ್ರಾಧಿಕಾರದಿಂದ ನೀಡಲಾದ ಜಾತಿ ಪ್ರಮಾಣಪತ್ರ

ಸಕ್ಷಮ ಪ್ರಾಧಿಕಾರದಿಂದ ನೀಡಲಾದ ಆದಾಯ ಪ್ರಮಾಣಪತ್ರ

ಆಧಾರ್ ಕಾರ್ಡ್ ಪ್ರತಿ (ನಿವಾಸದ ಪುರಾವೆ)

ಬ್ಯಾಂಕ್ ಪಾಸ್ ಬುಕ್ ಪ್ರತಿ

Join Telegram Group Join Now
WhatsApp Group Join Now

ಸ್ವಯಂ ಘೋಷಣೆ ಪತ್ರ Click here

ಖಾತರಿ ನೀಡುವವರ ಸ್ವಯಂ ಘೋಷಣೆ ಪತ್ರ Click here

ಸ್ವಯಂ ಉದ್ಯೋಗ ಯೋಜನೆ | Self Employment Scheme

ಈ ಯೋಜನೆಯಡಿಯಲ್ಲಿ ಅಲ್ಪಸಂಖ್ಯಾತರ ಸಮುದಾಯದ ಜನರಿಗೆ ವ್ಯಾಪಾರ, ಸಣ್ಣ ಪ್ರಮಾಣದ ಗುಡಿ ಕೈಗಾರಿಕೆ, ಸೇವಾ ಕ್ಷೇತ, ಕೃಷಿ ಆಧಾರಿತ ಚಟುವಟಿಕೆಗಳು ಮುಂತಾದಹುಗಳನ್ನು ಪ್ರಾರಂಭಿಸಲು ಸಾಲ ಮತ್ತು ಸಹಾಯಧನ ಓದಗಿಸಲಾಗುವುದು. ಘಟಕ ವೆಚ್ಚದ ಶೇ.33 ಅಥವಾ ಗರಿಷ್ಠ ಮಿತಿ ರೂ.1.00 ಲಕ್ಷದ ಸಹಾಯಧನ ನೀಡಲಾಗುಹುದು.

 ಸ್ವಯಂ ಉದ್ಯೋಗ ಯೋಜನೆ ಅರ್ಹತೆ | Self Employment Scheme Eligibility
 1. ಅರ್ಜಿದಾರರು ಸರ್ಕಾರಿ ಆದೇಶದಲ್ಲಿ ವಿವರಿಸಿದಂತೆ ಧಾರ್ಮಿಕ ಅಲ್ಪಸಂಖ್ಯಾತರ ಸಮುದಾಯಕ್ಕೆ ಸೇರಿದವರಾಗಿರಬೇಕು.
 2. ಅರ್ಜಿದಾರರು ಕರ್ನಾಟಕದ ಖಾಯಂ ನಿವಾಸಿಯಾಗಿರಬೇಕು.
 3. ಅರ್ಜಿದಾರರ ವಯಸ್ಸು 18 ರಿಂದ 55 ವರ್ಷಗಳ ನಡುವೆ ಇರಬೇಕು
 4. ಎಲ್ಲಾ ಮೂಲಗಳಿಂದ ಕುಟುಂಬದ ವಾರ್ಷಿಕ ಆದಾಯ ಗ್ರಾಮೀಣ ಪ್ರದೇಶದಲ್ಲಿ ರೂ. 81,000/- ಹಾಗೂ ನಗರ ಪ್ರದೇಶದಲ್ಲಿ 1,03,000 ಗಿಂತ ಕಡಿಮೆ ಇರಬೇಕು.
 5. ಅರ್ಜಿದಾರರ ಕುಟುಂಬದ ಯಾವುದೇ ಸದಸ್ಯರು ಕೇಂದ್ರ/ರಾಜ್ಯ ಸರ್ಕಾರಿ / PSU ಉದ್ಯೋಗಿಯಾಗಿರಬಾರದು.
 6. ಅರ್ಜಿದಾರರು KMDC ಯಲ್ಲಿ ಸುಸ್ತಿದಾರರಾಗಿರಬಾರದು
ಸ್ವಯಂ ಉದ್ಯೋಗ ಯೋಜನೆಗೆ ಅಗತ್ಯ ದಾಖಲೆಗಳು | Self Employment Scheme required ducuments
 • ಸಕ್ಷಮ ಪ್ರಾಧಿಕಾರದಿಂದ ನೀಡಲಾದ ಜಾತಿ ಪ್ರಮಾಣಪತ್ರ
 • ಸಕ್ಷಮ ಪ್ರಾಧಿಕಾರದಿಂದ ನೀಡಲಾದ ಆದಾಯ ಪ್ರಮಾಣಪತ್ರ
 • ಆಧಾರ್ ಕಾರ್ಡ್ ಪ್ರತಿ (ನಿವಾಸದ ಪುರಾವೆ)
 • ಯೋಜನಾ ವರದಿ

ಅರಿವು ವಿದ್ಯಾಭ್ಯಾಸ ಸಾಲ ಯೋಜನೆ | Awareness Education Loan Scheme

2022-23ನೇ ಸಾಲಿನ ಅರಿವು ವಿದ್ಯಾಭ್ಯಾಸ ಸಾಲ ಯೋಜನೆಯಡಿಯಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ (CET/NEET) ಮುಖಾಂತರ ಎಂ.ಬಿ.ಬಿ.ಎಸ್/ ಬಿ.ಡಿ.ಎಸ್/ಬಿ ಆಯುಷ್/ ಬ್ಯಾಚುಲರ್ ಆಫ್ ಆರ್ಕಿಟೆಕ್ಚರ್/ಬ್ಯಾಚುಲರ್ ಆಫ್ ಇಂಜಿನಿಯರಿಂಗ್/ಬ್ಯಾಚುಲರ್ ಆಫ್ ಟೆಕ್ನಾಲಜಿ ಕೋರ್ಸ್ ಗಳಿಗೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಸಾಲವನ್ನು ನೀಡಲಾಗುತ್ತದೆ.

ಅರಿವು ವಿದ್ಯಾಭ್ಯಾಸ ಸಾಲ ಯೋಜನೆ ಅರ್ಹತೆ | Awareness Education Loan Scheme Eligibility
 1. ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ (CET/NEET) ಮುಖಾಂತರ ಎಂ.ಬಿ.ಬಿ.ಎಸ್, ಎಂ.ಡಿ, ಎಂ.ಎಸ್ ಕೋರ್ಸ್ ಗಳಿಗೆ, ಸರ್ಕಾರಿ ಕೋಟಾದಲ್ಲಿ ಸರ್ಕಾರಿ/ಖಾಸಗಿ ಕಾಲೇಜು ಗಳಿಗೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಗರಿಷ್ಠ ರೂ. 3,00,000/- ವನ್ನು ನೀಡಲಾಗುತ್ತದೆ.
 2. ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ (ಸಿ.ಇ.ಟಿ./ನೀಟ್) ಮುಖಾಂತರ ಆಯ್ಕೆಯಾದ ಬಿ. ಡಿ. ಎಸ್, ಎಂ.ಡಿ.ಎಸ್ ಕೋರ್ಸುಗಳಿಗೆ ಸರ್ಕಾರಿ ಕೋಟಾದಲ್ಲಿ ಸರ್ಕಾರಿ/ಖಾಸಗಿ ಕಾಲೇಜು ಗಳಿಗೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಗರಿಷ್ಠ ರೂ 1,00,000 ವರೆಗೆ ಮತ್ತು ಬಿ.ಆಯುಷ್ ಮತ್ತು ಎಂ.ಆಯುಷ್ ಕೋರ್ಸ್ ಗಳಿಗೆ, ಸರ್ಕಾರಿ ಕೋಟಾದಲ್ಲಿ ಸರ್ಕಾರಿ/ಖಾಸಗಿ ಕಾಲೇಜು ಗಳಿಗೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಗರಿಷ್ಠ ರೂ. 50,000 ಗಳನ್ನು ಬಿಡುಗಡೆ ಮಾಡುವುದು.
 3. ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ (ಸಿ.ಇ.ಟಿ./ನೀಟ್) ಮುಖಾಂತರ ಆಯ್ಕೆಯಾದ ಬ್ಯಾಚುಲಾರ್ ಆಫ್ ಆರ್ಕಿಟೆಕ್ಟ/ಇಂಜಿನಿಯರಿಂಗ್/ಟೆಕ್ನಾಲಜಿ (ಬಿ.ಇ./ಬಿ.ಟೆಕ್), ಎಂ.ಟೆಕ್, ಎಂ.ಇ. ಬಿ.ಆರ್ಕ್. ಎಂ.ಆರ್ಕ್ ವ್ಯಾಸಾಂಗ ಮಾಡುತ್ತಿರುವ, ಸರ್ಕಾರಿ ಕೋಟಾದಲ್ಲಿ ಸರ್ಕಾರಿ/ಖಾಸಗಿ ಕಾಲೇಜು ಗಳಿಗೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಗರಿಷ್ಠ ರೂ 50,000 ಗಳನ್ನು ಬಿಡುಗಡೆ ಮಾಡುವುದು.
 4. ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ (CET/NEET) ಮುಖಾಂತರ ಎಂ ಬಿ ಎ, ಎಂ ಸಿ ಎ, ಎಲ್ ಎಲ್ ಬಿ ಕೋರ್ಸಗಳಿಗೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಬೋಧನಾ ಶುಲ್ಕ ಮಾತ್ರ ಗರಿಷ್ಠ ರೂ.50,000/-ಗಳನ್ನು ಸಾಲವಾಗಿ ನೀಡಲಾಗುವುದು.
 5. ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ (ಸಿ.ಇ.ಟಿ/ನೀಟ್) ಮುಖಾಂತರ ಆಯ್ಕೆಯಾದ B.Sc. in Horticulture, Agriculture, Dairy Technology, Forestry, Veterinary, Animal science, Food Technology, Bio Technology, Fisheries, Sericulture, Home/community Sciences, Food Nutrition and Dietetics, ಕೋರ್ಸ್‍ಗಳಿಗೆ ಸರ್ಕಾರಿ ಕೋಟಾದಲ್ಲಿ ಸರ್ಕಾರಿ/ಖಾಸಗಿ ಕಾಲೇಜುಗಳಿಗೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಬೋಧನಾ ಶುಲ್ಕ ಮಾತ್ರ ಗರಿಷ್ಟ ರೂ.50,000/-ಗಳು ಸಾಲವಾಗಿ ನೀಡಲಾಗುವುದು.
 6. ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ (ಸಿ.ಇ.ಟಿ/ನೀಟ್) ಮುಖಾಂತರ ಆಯ್ಕೆಯಾದ B.Pharma, M.Pharma, Pharma.D,and D.Pharma, ಕೋರ್ಸ್‍ಗಳಿಗೆ ಸರ್ಕಾರಿ ಕೋಟಾದಲ್ಲಿ ಸರ್ಕಾರಿ/ಖಾಸಗಿ ಕಾಲೇಜುಗಳಿಗೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಬೋಧನಾ ಶುಲ್ಕ ಮಾತ್ರ ಗರಿಷ್ಟ ರೂ.50,000/-ಗಳು ಸಾಲವಾಗಿ ನೀಡಲಾಗುವುದು.
 7. ಎಲ್ಲಾ ಮೂಲಗಳಿಂದ ಕುಟುಂಬದ ವಾರ್ಷಿಕ ಆದಾಯ ರೂ. 8,00,000/- ಗಿಂತ ಕಡಿಮೆ ಇರಬೇಕು.. ವಿದ್ಯಾರ್ಥಿಯು ಪಡೆದ ಸಾಲವನ್ನು ಕೋರ್ಸ್ ಮುಗಿದ 1 ವರ್ಷದ ನಂತರ 48 ತಿಂಗಳ ಅವಧಿಯಲ್ಲಿ 2% ಬಡ್ಡಿದರದೊಂದಿಗೆ ಮರುಪಾವತಿ ಮಾಡಬೇಕು.
ಅರಿವು ವಿದ್ಯಾಭ್ಯಾಸ ಸಾಲ ಯೋಜನೆಗೆ ಅಗತ್ಯ ದಾಖಲೆಗಳು | Awareness Education Loan Scheme required documents

ಸಕ್ಷಮ ಪ್ರಾಧಿಕಾರದಿಂದ ನೀಡಲಾದ ಜಾತಿ ಪ್ರಮಾಣಪತ್ರ

ಸಕ್ಷಮ ಪ್ರಾಧಿಕಾರದಿಂದ ನೀಡಲಾದ ಆದಾಯ ಪ್ರಮಾಣಪತ್ರ

ಆಧಾರ್ ಕಾರ್ಡ್ ಪ್ರತಿ (ನಿವಾಸದ ಪುರಾವೆ)

CET ಪ್ರವೇಶ ಪತ್ರ

NEET ಪ್ರವೇಶ ಪತ್ರ

SSLC/10 ನೇ ತರಗತಿಯ ಅಂಕಪಟ್ಟಿ

ಡಿಪ್ಲೋಮ/ಪಿ.ಯು.ಸಿ ಅಂಕಪಟ್ಟಿ

ಇಂಡೆಮ್ನಿಟೀ (ನಷ್ಟ ಪರಿಹಾರ) ಬಾಂಡ್ Click here

ವಿದ್ಯಾರ್ಥಿಯ ಸ್ವಯಂ ಘೋಷಣೆ ಪತ್ರ Click here

ಪೋಷಕರ ಸ್ವಯಂ ಘೋಷಣೆ ಪತ್ರ Click here

ವ್ಯಾಪಾರ/ಉದ್ಯಮಗಳಿಗೆ ನೇರ ಸಾಲ ಯೋಜನೆ | Direct Loan Scheme for Business/Industries

ಈ ಯೋಜನೆಯಡಿಯಲ್ಲಿ ವ್ಯಾಪಾರ/ಉದ್ದಿಮೆ ಚಟುವಟಿಕೆ ಕೈಗೊಳ್ಳಲು ಬಯಸುವ ಫಲಾನುಭವಿಗಳಿಗೆ ಆಸ್ತಿಯ (ಕಟ್ಟಡ/ಭೂಮಿ) ಅಡಮಾನದ ಮೇಲೆ ಸಾಲವನ್ನು ಒದಗಿಸಲಾಗುವುದು.

ವ್ಯಾಪಾರ/ಉದ್ಯಮಗಳಿಗೆ ನೇರ ಸಾಲ ಯೋಜನೆ ಅರ್ಹತೆ | Direct Loan Scheme for Business/Industries Eligibility
 1. ಕರ್ನಾಟಕ ರಾಜ್ಯದ ನಿವಾಸಿಯಾಗಿರಬೇಕು
 2. ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿರಬೇಕು
 3. ಅರ್ಜಿದಾರರ ವಯಸ್ಸು 18 ರಿಂದ 55 ವರ್ಷದೊಳಗಿರಬೇಕು
 4. ಅರ್ಜಿದಾರರು ಕೆ.ಎಂ.ಡಿ.ಸಿ. ಗೆ ಸುಸ್ತಿದಾರರಾಗಿರಬಾರದು.
 5. ನಿಗಮಕ್ಕೆ ಆಸ್ತಿಯ (ಕಟ್ಟಡ/ಭೂಮಿ) ಅಡಮಾನದ ಮೇಲೆ ಮಾತ್ರ ಸಾಲವನ್ನು ಒದಗಿಸಲಾಗುತ್ತದೆ. ಆಸ್ತಿಯ ಮೌಲ್ಯವು ಸಾಲದ ಮೊತ್ತಕ್ಕಿಂತ ಕಡಿಮೆಯಿರಬಾರದು
 6. ವ್ಯಾಪಾರ ಉದ್ದಿಮೆ ಸಾಲವನ್ನು ಕುಟುಂಬದ ಒಬ್ಬ ಸದಸ್ಯರಿಗೆ ಮಾತ್ರ ನೀಡಲಾಗುವುದು.
 7. ಕುಟುಂಬದ ವಾರ್ಷಿಕ ಆದಾಯ ರೂ 8.00 ಲಕ್ಷಗಳಿಗಿಂತ ಕಡಿಮೆ ಇರುವ ಅರ್ಜಿದಾರರಿಗೆ ರೂ 20.00 ಲಕ್ಷವರೆಗೆ ಶೇ 4 ಬಡ್ಡಿ ದರದಲ್ಲಿ ಸಾಲ ನೀಡಲಾಗುವುದು
 8. ಕುಟುಂಬದ ವಾರ್ಷಿಕ ಆದಾಯ ರೂ 8.00 ದಿಂದ 15.00 ಲಕ್ಷವರೆಗೆ ಇರುವ ಅರ್ಜಿದಾರರಿಗೆ ರೂ 20.00 ಲಕ್ಷವರೆಗೆ ಶೇ 6 ಬಡ್ಡಿ ದರದಲ್ಲಿ ಸಾಲ ನೀಡಲಾಗುವುದು

ವ್ಯಾಪಾರ/ಉದ್ಯಮಗಳಿಗೆ ನೇರ ಸಾಲ ಯೋಜನೆಗೆ ಅಗತ್ಯ ದಾಖಲೆಗಳು | Direct Loan Scheme for Business/Industries Scheme required documents

 • ಆಧಾರ್‌ ಕಾರ್ಡ್‌ ಪ್ರತಿ (ನಿವಾಸದ ಪುರಾವೆ)
 • ಸಕ್ಷಮ ಪ್ರಾಧಿಕಾರದಿಂದ ನೀಡಲಾದ ಜಾತಿ ಪ್ರಮಾಣಪತ್ರ
 • ಸಕ್ಷಮ ಪ್ರಾಧಿಕಾರದಿಂದ ನೀಡಲಾದ ಆದಾಯ ಪ್ರಮಾಣಪತ್ರ
 • ಆಸ್ತಿಯ ಗುತ್ತಿಗೆ ಪತ್ರ/ವಿಭಜನಾ ಪತ್ರ/ಬಿಡುಗಡೆ ಪತ್ರ/ಗಿಫ್ಟ್ ಡೀಡ್/ಮಾರಾಟ ಪತ್ರ
 • ಸಿಎ(ಚಾರ್ಟರ್ಡ್‌ ಅಕೌಂಟೆಂಟ್) ವತಿಯಿಂದ ದೃಢೀಕರಿಸಿದ ಯೋಜನಾ ವರದಿ/ಚಟುವಟಿಕೆಗಳ ವಿವರ
 • ಯೋಜನೆಗೆ ಸಂಬಂಧಿಸಿದ ದರಪಟ್ಟಿಗಳು
 • ಅಡಮಾನ ಮಾಡುವ ಸ್ವತ್ತಿಗೆ ಸಂಬಂಧಿಸಿದಂತೆ ಸ್ಥಳೀಯ ಸಂಸ್ಥೆಗಳಿಂದ ಪಡೆದ ಪರವಾನಿಗೆ ಪತ್ರ
 • ಕಟ್ಟಡದ ಖಾತಾ ಎಕ್ಸಟ್ರಾಕ್ಟ್‌ ಮತ್ತು ಖಾತಾ ಪ್ರಮಾಣ ಪತ್ರ ಅಥವಾ ಭೂಮಿಯ ಹಕ್ಕು ಬದಲಾವಣೆ ಪ್ರತಿ
 • ಕಂದಾಯ ಜಮೀನಿನ ಪಹಣಿ ಮತ್ತು ಪೋಡಿ/ವಿಭಜನಾ ಪತ್ರ
 • ಋಣಭಾರ ಪ್ರಮಾಣ ಪತ್ರ (ಇಸಿ) ಫಾರಂ ನಂ 15
 • ಸ್ಥಳೀಯ ಸಂಸ್ಥೆಗಳ ಇತ್ತೀಚಿನವರೆಗೆ ತೆರಿಗೆ ಪಾವತಿಸಿದ ರಸೀತಿ
 • ಸಕ್ಷಮ ಪ್ರಾಧಿಕಾರದಿಂದ ಪಡೆದ ಜಮೀನಿನ ಮಾರ್ಗದರ್ಶಿ ಬೆಲೆ
 • ಸ್ವತ್ತನ್ನು ಅಡಮಾನು ಮಾಡಲು ಕುಟುಂಬ ಸದಸ್ಯರ ನಿರಾಕ್ಷೇಪಣಾ ಪತ್ರ ವಂಶವೃಕ್ಷದೊಂದಿಗೆ.
 • ಸ್ವಯಂ ಘೋಷಣೆ ಪತ್ರClick here
 • ಕಟ್ಟಡವಾಗಿದ್ದಲ್ಲಿ ನೋಂದಾಯಿತ ಮೌಲ್ಯಮಾಪಕರಿಂದ ಮೌಲ್ಯಮಾಪನ ವರದಿ/ ಮೌಲ್ಯಮಾಪನ ಪ್ರಮಾಣಪತ್ರ

ಗಂಗಾ ಕಲ್ಯಾಣ ಯೋಜನೆ | Ganga Welfare Scheme

ಗ್ರಾಮೀಣ ಪ್ರದೇಶದಲ್ಲಿ ವಾಸಿಸುವ ಅಲ್ಪಸಂಖ್ಯಾತರ ವರ್ಗಕ್ಕೆ ಸೇರಿದ ಸಣ್ಣ ಹಾಗೂ ಅತಿ ಸಣ್ಣ ರೈತರಿಗೆ ಕೊಳವೆಬಾವಿಯನ್ನು ಕೊರೆದು, ಪಂಪ್ ಮೋಟಾರ್ ಹಾಗೂ ವಿದ್ಯುದ್ಧೀಕರಣ ಮಾಡಿ ನೀರನ್ನು ಒದಗಿಸಲಾಗುತ್ತದೆ, ಈ ಯೋಜನೆಯು ಸಂಪೂರ್ಣ ಸಹಾಯಧನ ಯೋಜನೆಯಾಗಿದೆ. ವೈಯಕ್ತಿಕ ಕೊಳವೆ ಬಾವಿ ಯೋಜನೆಗೆ ಸರ್ಕಾರವು ರೂ.3.75 ಲಕ್ಷಗಳನ್ನು 1. ಬೆಂಗಳೂರು ಗ್ರಾಮಾಂತರ 2. ಕೋಲಾರ 3. ಚಿಕ್ಕಬಳ್ಳಾಪುರ 4. ರಾಮನಗರ 5. ತುಮಕೂರು ಜಿಲ್ಲೆಗಳಿಗೆ ನಿಗದಿಪಡಿಸಿರುತ್ತದೆ ಮತ್ತು ಇತರೆ ಜಿಲ್ಲೆಗಳಿಗೆ ರೂ.2.25 ಲಕ್ಷಗಳನ್ನು ನಿಗದಿಪಡಿಸಿರುತ್ತದೆ.

ಗಂಗಾ ಕಲ್ಯಾಣ ಯೋಜನೆ ಅರ್ಹತೆ | Ganga Welfare Scheme Eligibility

 1. ಅರ್ಜಿದಾರರು ಸರ್ಕಾರಿ ಆದೇಶದಲ್ಲಿ ವಿವರಿಸಿದಂತೆ ಧಾರ್ಮಿಕ ಅಲ್ಪಸಂಖ್ಯಾತರ ಸಮುದಾಯಕ್ಕೆ ಸೇರಿದವರಾಗಿರಬೇಕು.
 2. ಪ್ರತಿ ಫಲಾನುಭವಿಗೆ 1 ಎಕರೆ 20 ಗುಂಟೆ (1 ಎಕರೆ 50 ಸೆಂಟ್ಸ್) ಎಕರೆಯಿಂದ 5 ಎಕರೆಯವರೆಗೆ ಖುಷ್ಕಿ ಜಮೀನಿರಬೇಕು,ಕೊಡಗು, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ ಮತ್ತು ಹಾಸನ ಇಂತಹ ಜಿಲ್ಲೆಗಳಲ್ಲಿ ಜಮೀನಿನ ಲಭ್ಯತೆ ಬಹಳ ಕಡಿಮೆ ಇರುವುದರಿಂದ ಕನಿಷ್ಠ 1 ಎಕರೆ ಜಮೀನನ್ನು ಹೋದಿರತಕ್ಕದ್ದು.
 3. ಅರ್ಜಿದಾರರು ಕರ್ನಾಟಕ ರಾಜ್ಯದ ಖಾಯಂ ನಿವಾಸಿಗಳಾಗಿರಬೇಕು.
 4. ಅರ್ಜಿದಾರರು ಸಣ್ಣ /ಅತಿ ಸಣ್ಣ ಹಿಡುವಳಿದಾರ ರೈತರಾಗಿರಬೇಕು.
 5. ಗ್ರಾಮೀಣ ಪ್ರದೇಶಗಳಲ್ಲಿ ಅರ್ಜಿದಾರರ ಕುಟುಂಬದ ವಾರ್ಷಿಕ ಆದಾಯ ರೂ. 96,000/- ಗಳನ್ನು ಮೀರಬಾರದು.
 6. ಅರ್ಜಿದಾರರ ವಯಸ್ಸು 18 ರಿಂದ 55 ವರ್ಷಗಳ ನಡುವೆ ಇರಬೇಕು.

ಗಂಗಾ ಕಲ್ಯಾಣ ಯೋಜನೆಗೆ ಅಗತ್ಯ ದಾಖಲೆಗಳು | Ganga Welfare Scheme required document

ಸಕ್ಷಮ ಪ್ರಾಧಿಕಾರದಿಂದ ನೀಡಲಾದ ಜಾತಿ ಪ್ರಮಾಣಪತ್ರ

ಸಕ್ಷಮ ಪ್ರಾಧಿಕಾರದಿಂದ ನೀಡಲಾದ ಆದಾಯ ಪ್ರಮಾಣಪತ್ರ

ಆಧಾರ್ ಕಾರ್ಡ್ ಪ್ರತಿ (ನಿವಾಸದ ಪುರಾವೆ)

ಇತ್ತೀಚಿನ ಆರ್‌ಟಿಸಿ ಪ್ರತಿ

ಸಕ್ಷಮ ಪ್ರಾಧಿಕಾರದಿಂದ ನೀಡಲಾದ ಸಣ್ಣ/ ಅತಿ ಸಣ್ಣ ಹಿಡುವಳಿದಾರ ಪ್ರಮಾಣಪತ್ರ

ಬ್ಯಾಂಕ್ ಪಾಸ್ ಬುಕ್ ಪ್ರತಿ

ಭೂ-ಕಂದಾಯ ಪಾವತಿಸಿದ ರಸೀದಿ

ಸ್ವಯಂ ಘೋಷಣೆ ಪತ್ರ Click here

ಖಾತರಿ ನೀಡುವವರ ಸ್ವಯಂ ಘೋಷಣೆ ಪತ್ರ Click here

ಆಟೋ ರಿಕ್ಷಾ /ಟ್ಯಾಕ್ಸಿ /ಸರಕು ವಾಹನಗಳ ಖರೀದಿಗೆ ಸಹಾಯಧನ | Subsidy on purchase of auto rickshaw/taxi/goods vehicles Scheme

ಸದರಿ ಯೋಜನೆಯಡಿ ಬ್ಯಾಂಕುಗಳಿಂದ ಮಂಜೂರಾತಿ ನೀಡಿದ / ಪಡೆದ ಆಟೋ ರಿಕ್ಷಾ /ಟ್ಯಾಕ್ಸಿ /ಸರಕು ವಾಹನಗಳನ್ನು ಖರೀದಿಸಲು ಪ್ರತಿ ಫಲಾನುಭವಿಗೆ ವಾಹನದ ಮೌಲ್ಯದ ಶೇ 33 ರಷ್ಟು ಅಥವಾ ಗರಿಷ್ಠ ರೂ. 2,50,000/- ರ ವರೆಗೆ ಸಹಾಯಧನ ನೀಡಲಾಗುತ್ತದೆ. ವಾಹನದ ಉಳಿದ ಮೊತ್ತಕ್ಕೆ ಬ್ಯಾಂಕ್ ಸಾಲ ಪಡೆದುಕೊಂಡ ಬಗ್ಗೆ ಬ್ಯಾಂಕ್ ಪತ್ರವನ್ನು ಸಲ್ಲಿಸಬೇಕು.

ಆಟೋ ರಿಕ್ಷಾ /ಟ್ಯಾಕ್ಸಿ /ಸರಕು ವಾಹನಗಳ ಖರೀದಿಗೆ ಸಹಾಯಧನ ಅರ್ಹತೆ | Subsidy on purchase of auto rickshaw/taxi/goods vehicles Scheme Eligibility

 1. ಅರ್ಜಿದಾರರು ಕರ್ನಾಟಕ ರಾಜ್ಯದ ಧಾರ್ಮಿಕ ಅಲ್ಪಸಂಖ್ಯಾತರಿಗೆ ಸೇರಿದವರಾಗಿರಬೇಕು.
 2. ಅರ್ಜಿದಾರರು ಕರ್ನಾಟಕದ ಶಾಶ್ವತ ನಿವಾಸಿಯಾಗಿರಬೇಕು.
 3. ಅರ್ಜಿದಾರರ ವಯಸ್ಸು 18 ರಿಂದ 55 ವರ್ಷಗಳ ನಡುವೆ ಇರಬೇಕು.
 4. ಎಲ್ಲಾ ಮೂಲಗಳಿಂದ ಬರುವ ವಾರ್ಷಿಕ ಕುಟುಂಬದ ಆದಾಯವು ರೂ. 4,50,000/- ಕ್ಕಿಂತ ಕಡಿಮೆ ಇರಬೇಕು.
 5. ಅರ್ಜಿದಾರರು ಪ್ರಾದೇಶಿಕ ಸಾರಿಗೆ ಅಧಿಕಾರಿಯಿಂದ ನೀಡಲಾದ ಚಾಲನಾ ಪರವಾನಗಿ ಹೊಂದಿರಬೇಕು
 6. ಅರ್ಜಿದಾರರ ಕುಟುಂಬದ ಯಾವುದೇ ಸದಸ್ಯರು ಕೇಂದ್ರ/ರಾಜ್ಯ ಸರ್ಕಾರಿ ಉದ್ಯೋಗಿಯಾಗಬಾರದು.
 7. ಕಳೆದ 05 ವರ್ಷಗಳಲ್ಲಿ ಅರ್ಜಿದಾರ ಅಥವಾ ಅವನ/ಅವಳ ಕುಟುಂಬದ ಸದಸ್ಯರು ಸರ್ಕಾರದ / ನಿಗಮದ ಯಾವುದೇ ಇತರ ಯೋಜನೆಯಡಿಯಲ್ಲಿ(ಅರಿವು ಯೋಜನೆ ಹೊರತುಪಡಿಸಿ) ಸಾಲ ಸೌಲಭ್ಯಗಳನ್ನು ಪಡೆದಿರಬಾರದು.

ಆಟೋ ರಿಕ್ಷಾ /ಟ್ಯಾಕ್ಸಿ /ಸರಕು ವಾಹನಗಳ ಖರೀದಿಗೆ ಸಹಾಯಧನ ಯೋಜನೆಗೆ ಅಗತ್ಯ ದಾಖಲೆಗಳು | Subsidy on purchase of auto rickshaw/taxi/goods vehicles Scheme required document

ಸಕ್ಷಮ ಪ್ರಾಧಿಕಾರದಿಂದ ನೀಡಲಾದ ಜಾತಿ ಪ್ರಮಾಣಪತ್ರ

ಸಕ್ಷಮ ಪ್ರಾಧಿಕಾರದಿಂದ ನೀಡಲಾದ ಆದಾಯ ಪ್ರಮಾಣಪತ್ರ

ಆಧಾರ್ ಕಾರ್ಡ್ ಪ್ರತಿ (ನಿವಾಸದ ಪುರಾವೆ)

ವಾಹನ ಚಾಲನಾ ಪರವಾನಗಿ ಪ್ರತಿ

ಬ್ಯಾಂಕ್ ಪಾಸ್ ಬುಕ್ ಪ್ರತಿ

ವಾಹನದ ಅಂದಾಜು ದರಪಟ್ಟಿ

ಸ್ವಯಂ ಘೋಷಣೆ ಪತ್ರ Click here

ಮೇಲಿನ ಎಲ್ಲಾ ಯೋಜನೆ ಪ್ರಮುಖ ಲಿಂಕ್‌ಗಳು | Important Links

24×7 ಸಹಾಯವಾಣಿ

Leave a Reply

ನಮ್ಮ WhatsApp ಗುಂಪಿಗೆ ಸೇರಲು ಇಲ್ಲಿ ಕ್ಲಿಕ್ ಮಾಡಿ