Covid 19: ನಾಳೆಯಿಂದ ಕೊವಿಡ್ ಟೆಸ್ಟಿಂಗ್ ಹೆಚ್ಚಳ: ಔಷಧ, ಆಕ್ಸಿಜನ್​​, ಬೆಡ್​​ ವ್ಯವಸ್ಥೆ ಮಾಡಿಕೊಳ್ಳಲು ಸೂಚನೆ

Covid 19 Karnataka Govt instruction:

Covid 19: ನೆರೆಯ ಕೇರಳ ರಾಜ್ಯದಲ್ಲಿ ಕೊರೊನಾ ವೈರಸ್​​ನ ಜೆಎನ್​​1 ರೂಪಾಂತರಿ ತಳಿಯಿಂದಾಗಿ ಸೋಂಕು ಹರಡುತ್ತಿದೆ. ಈ ಹಿನ್ನೆಲೆಯಲ್ಲಿ ಇತ್ತ ಕರ್ನಾಟಕದಲ್ಲಿ ಆತಂಕ ಸೃಷ್ಟಿಯಾಗಿದ್ದು, ಈ ಬಗ್ಗೆ ಆರೋಗ್ಯ ಇಲಾಖೆಯ ಅಧಿಕಾರಿಗಳು ಹಾಗೂ ಕೊವಿಡ್ ತಾಂತ್ರಿಕ ಸಲಹಾ ಸಮಿತಿ ನಡೆಸಿದ ಮಹತ್ವ ಸಭೆ ಅಂತ್ಯವಾಗಿದೆ.60 ವರ್ಷಕ್ಕಿಂತ ಮೇಲ್ಪಟ್ಟ ಜನರು ಫೇಸ್ ಮಾಸ್ಕ್ ಧರಿಸಲು, ಜನಸಂದಣಿ ಪ್ರದೇಶಗಳನ್ನು ತಪ್ಪಿಸುವಂತೆ ಸರ್ಕಾರ ತಿಳಿಸಿದೆ.

Karnataka Govt instructed to arrange covid 19 medicine, oxygen, beds
Karnataka Govt instructed to arrange covid 19 medicine, oxygen, beds

ಹಾಗಾದ್ರೆ ಸಭೆಯಲ್ಲಿ ಏನೆಲ್ಲಾ ಸಲಹೆ ಸೂಚನೆಗಳನ್ನು ನೀಡಲಾಗಿದೆ ಎನ್ನುವ ವಿವರ ಇಲ್ಲಿದೆ.

ಬೆಂಗಳೂರು, (ಡಿಸೆಂಬರ್ 19): ಕರ್ನಾಟಕದಲ್ಲಿ ಕೊರೊನಾ ವೈರಸ್​​ನ ಜೆಎನ್​​1 ರೂಪಾಂತರಿ(Coronavirus JN1) ತಳಿ ಭೀತಿ ಶುರುವಾಗಿದೆ. ಈ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ಕೊವಿಡ್ ಮಾರ್ಗಸೂಚಿ ಬಿಡುಗಡೆ ಮಾಡಿದೆ. ಇನ್ನು ಈ ಬಗ್ಗೆ ಆರೋಗ್ಯ ಇಲಾಖೆ ಆಯುಕ್ತ ರಂದೀಪ್ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದು, ಆರೋಗ್ಯ ಇಲಾಖೆಯಿಂದ ಕೊವಿಡ್ ಮಾರ್ಗಸೂಚಿ ಬಿಡುಗಡೆ ಮಾಡಿದ್ದೇವೆ. ಔಷಧ, ಆಕ್ಸಿಜನ್​​, ಬೆಡ್​​ ವ್ಯವಸ್ಥೆ ಮಾಡಿಕೊಳ್ಳಲು ಸೂಚನೆ ನೀಡಿದ್ದೇವೆ. ಕೊವಿಡ್ ಟೆಸ್ಟ್​ ಹೆಚ್ಚಿಸಲು ಅಧಿಕಾರಿಗಳು, ಸಿಬ್ಬಂದಿಗೆ ಸೂಚಿಸಲಾಗಿದೆ. ಕೊವಿಡ್ ಟೆಸ್ಟಿಂಗ್​ ಕಿಟ್​​ ಖರೀದಿಗೂ ಸೂಚನೆ ನೀಡಲಾಗಿದೆ ಎಂದು ಮಾಹಿತಿ ನೀಡಿದರು.

ಇನ್ನು ಓದಿ: ದೇಶದ ಹಲವೆಡೆ ಕೊರೋನಾ ಹೆಚ್ಚಳ ಹಿನ್ನಲೆ: ಕೇಂದ್ರದಿಂದ ಮಾರ್ಗಸೂಚಿ ರಿಲೀಸ್.

ನಾಳೆಯಿಂದ ಕೊವಿಡ್ ಟೆಸ್ಟಿಂಗ್ ಹೆಚ್ಚಿಸಲಾಗುವುದು. ಆರಂಭದಲ್ಲಿ 500 ರಿಂದ 1000 ಕೊವಿಡ್ ಟೆಸ್ಟಿಂಗ್ ಮಾಡಲಾಗುತ್ತೆ. ಒಂದು ವಾರದ ಬಳಿಕ 5000 ಕೊವಿಡ್ ಟೆಸ್ಟಿಂಗ್ ಮಾಡಲಾಗುತ್ತೆ. ವಿಶ್ವದಲ್ಲಿ JN1 ವೈರಸ್ ನವೆಂಬರ್ ನಲ್ಲಿ​ 10% ಹರಡುವಿಕೆ ಇತ್ತು. ಈಗ ಡಿಸೆಂಬರ್ ವೇಳಗೆ 30% ಆಗಿದೆ. ನಮಲ್ಲಿಯೂ ಟೆಸ್ಟ್ ಮಾಡಿದಾಗ ಈ ಸ್ಟ್ರೇನ್ ಬರುವ ಸಾಧ್ಯತೆ ಇದೆ. ಟೆಸ್ಟಿಂಗ್ ಹೆಚ್ಚಳದ ಬಳಿಕ ಕೊವಿಡ್ ಸ್ಪಷ್ಟತೆ ಸಿಗಲಿದೆ. ಅಂತಾರಾಷ್ಟ್ರೀಯ ಪ್ರಯಾಣಿಕರ ಮೇಲೆ ತೀವ್ರ ನಿಗಾ ಇಡಲು ಸೂಚನೆ ನೀಡಲಾಗಿದ್ದು, ವಿಮಾನ ನಿಲ್ದಾಣಗಳಲ್ಲಿ ಪ್ರಯಾಣಿಕರಿಗೆ RTPCR ತಪಾಸಣೆ ಮಾಡಬೇಕು. ಒಂದು ವೇಳೆ ಟೆಸ್ಟ್​​ನಲ್ಲಿ ಪಾಸಿಟಿವ್ ಬಂದ್ರೆ ಜೆನೆಮಿಕ್ ಸೀಕ್ವೆನ್ಸ್​​​​ಗೆ ಸ್ಯಾಂಪಲ್ ಕಳಿಸಬೇಕು ಎಂದರು.

Karnataka Govt instructed to arrange covid 19 medicine, oxygen, beds
Karnataka Govt instructed to arrange covid 19 medicine, oxygen, beds

ಎರಡು ಪ್ರತ್ಯೇಕ ಮಾರ್ಗಸೂಚಿ

ಕೋವಿಡ್ ಬಗ್ಗೆ ಎರಡು ಪ್ರತ್ಯೇಕ ಮಾರ್ಗಸೂಚಿಗಳನ್ನು ರಾಜ್ಯ ಆರೋಗ್ಯ ಇಲಾಖೆ ಬಿಡುಗಡೆ ಮಾಡಿದೆ. ಒಂದು ಎಲ್ಲಾ ಜಿಲ್ಲೆಯ ಜಿಲ್ಲಾಧಿಕಾರಿ, ಸಿಇಒ ಹಾಗೂ ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ಆಗಿದ್ದರೆ ಮತ್ತೊಂದು ಸಾರ್ವಜನಿಕ ಸಲಹಾ ಮಾರ್ಗಸೂಚಿಯಾಗಿದೆ. ಜಿಲ್ಲಾಧಿಕಾರಿ, ಸಿಇಒ ಹಾಗೂ ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ಕೋವಿಡ್ ಸರ್ವೇಕ್ಷಣೆ ಹಾಗೂ ಮೇಲುಸ್ತುವಾರಿ ಕೈಗೊಳ್ಳುವ ನಿಟ್ಟಿನಲ್ಲಿ ಸುತ್ತೋಲೆ ಹೊರಡಿಸಲಾಗಿದೆ. ಮತ್ತೊಂದಡೆ, ಕೋವಿಡ್ ಹೆಚ್ಚಳ ಆಗುತ್ತಿರುವ ಕಾರಣ ಸಾರ್ವಜನಿಕರಿಗೆ ಪ್ರತ್ಯೇಕ ಮಾರ್ಗಸೂಚಿ ಬಿಡುಗಡೆ ಮಾಡಲಾಗಿದೆ.

ಭಾರತೀಯ SARS COV-2 ಜೀನೋಮಿಕ್ಸ್ ಕನ್ಸೋರ್ಟಿಯಂ(INSACOG) ಪ್ರಯೋಗಾಲ

RT-PCR ಪರೀಕ್ಷೆಗಳ ಸಂಖ್ಯೆಯನ್ನು ಹೆಚ್ಚಿಸಲು ಮತ್ತು ಭಾರತೀಯ SARS COV-2 ಜೀನೋಮಿಕ್ಸ್ ಕನ್ಸೋರ್ಟಿಯಂ(INSACOG) ಪ್ರಯೋಗಾಲಯಗಳಿಗೆ ಜೀನೋಮ್ ಅನುಕ್ರಮಕ್ಕಾಗಿ ಧನಾತ್ಮಕ ಮಾದರಿಗಳನ್ನು ಕಳುಹಿಸಲು ತಿಳಿಸಲಾಗಿದೆ. ಇದು ದೇಶದಲ್ಲಿ ಹೊರಹೊಮ್ಮಬಹುದಾದ ಯಾವುದೇ ಹೊಸ ರೂಪಾಂತರಗಳನ್ನು ಸಮಯೋಚಿತವಾಗಿ ಪತ್ತೆಹಚ್ಚಲು ಅನುಕೂಲವಾಗುತ್ತದೆ ಎಂದು ಹೇಳಲಾಗಿದೆ.

Join Telegram Group Join Now
WhatsApp Group Join Now
Karnataka Govt instructed to arrange covid 19 medicine, oxygen, beds
Karnataka Govt instructed to arrange covid 19 medicine, oxygen, beds

ಕೇಂದ್ರ ಆರೋಗ್ಯ ಸಚಿವಾಲಯ ಆಯೋಜಿಸಿರುವ ಸನ್ನದ್ಧ ಮತ್ತು ಮಾಕ್ ಡ್ರಿಲ್‌ನಲ್ಲಿ ರಾಜ್ಯಗಳು ಎಲ್ಲಾ ಸಾರ್ವಜನಿಕ ಮತ್ತು ಖಾಸಗಿ ಆರೋಗ್ಯ ಸೌಲಭ್ಯಗಳನ್ನು ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು ಎಂದು ಹೇಳಿದೆ.

Leave a Reply

ನಮ್ಮ WhatsApp ಗುಂಪಿಗೆ ಸೇರಲು ಇಲ್ಲಿ ಕ್ಲಿಕ್ ಮಾಡಿ