Farmers Crop Loss : ರಾಜ್ಯದ ರೈತರಿಗೆ ಗುಡ್ ನ್ಯೂಸ್: ಮುಂದಿನ ವಾರ ಹೆಕ್ಟೇರ್ 22,500ವರೆಗೆ ‘ಬೆಳೆ ಪರಿಹಾರ’ ಪಾವತಿ.

Farmers Crop Loss

Farmers Crop Loss : ಕೃಷಿ ಸಮುದಾಯ ಎದುರಿಸುತ್ತಿರುವ ಸವಾಲುಗಳನ್ನು ಎದುರಿಸಲು ಮಹತ್ವದ ಕ್ರಮದಲ್ಲಿ, ಕರ್ನಾಟಕ ರಾಜ್ಯ ಸರ್ಕಾರವು ಬೆಳೆ ನಷ್ಟದಿಂದ ಬಳಲುತ್ತಿರುವ ರೈತರಿಗೆ ಸಮಗ್ರ ಪರಿಹಾರ ಪ್ಯಾಕೇಜ್ ಘೋಷಿಸಿದೆ. ಈ ಪೂರ್ವಭಾವಿ ಉಪಕ್ರಮವು ಅನಿರೀಕ್ಷಿತ ಸಂದರ್ಭಗಳಿಂದ ಬಾಧಿತರಾದವರಿಗೆ ಆರ್ಥಿಕ ಪರಿಹಾರ ಮತ್ತು ಬೆಂಬಲವನ್ನು ಒದಗಿಸುವ ಗುರಿಯನ್ನು ಹೊಂದಿದೆ, ಇದು ತನ್ನ ಕೃಷಿ ಜನಸಂಖ್ಯೆಯ ಯೋಗಕ್ಷೇಮಕ್ಕೆ ಸರ್ಕಾರದ ಬದ್ಧತೆಯನ್ನು ಬಲಪಡಿಸುತ್ತದೆ.

Karnataka State government announces compensation for farmers crop loss
Karnataka State government announces compensation for farmers crop loss

ರಾಜ್ಯ ಸರ್ಕಾರದಿಂದ ರೈತರ ಬೆಳೆಹಾನಿಗೆ ಪರಿಹಾರವನ್ನು ಘೋಷಣೆ ಮಾಡಿತ್ತು. ಅದರಂತೆ ಮುಂದಿನ ವಾರ ಹೆಕ್ಟೇರ್ ಗೆ 22,500ರವರೆಗೆ ಬೆಳೆಹಾನಿ ಪರಿಹಾರ ಪಾವತಿ ಮಾಡಲಾಗುತ್ತಿದೆ.

ಈ ಕುರಿತಂತೆ ಕೃಷಿ ಸಚಿವ ಚಲುವರಾಯಸ್ವಾಮಿ ಅವರು ಮಾಹಿತಿ ನೀಡಿದ್ದು, ಬರ ಪರಿಸ್ಥಿತಿ ಹಿನ್ನಲೆಯಲ್ಲಿ ಕೇಂದ್ರ ಸರ್ಕಾರದ ಎನ್ ಡಿ ಆರ್ ಎಫ್ ಅನುದಾನ ನಿರೀಕ್ಷಿಸಿ, ಬೆಳೆಹಾನಿ ಪರಿಹಾರದ ಮೊದಲ ಕಂತಾಗಿ ಅರ್ಹ ರೈತರಿಗೆ ತಲಾ 2,000 ಪಾವತಿಸಲು ತಿರ್ಮಾನಿಸಲಾಗಿದೆ.

ಇನ್ನು ಓದಿ : ಹುಷಾರ್!! ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಮಾಡಿದವರಿಗೆ ಕೇಂದ್ರದಿಂದ ಖಡಕ್ ಆದೇಶ.

ಮುಂದಿನವಾರ ಆ ಹಣವನ್ನು ರೈತರ ಖಾತೆಗೆ ಜಮಾ ಮಾಡಲಾಗುತ್ತದೆ ಎಂದರು.

ಇನ್ನೂ ಶೇ.33ಕ್ಕಿಂತ ಹೆಚ್ಚು ಹಾನಿಯಾದ ವಿಸ್ತೀರಣಕ್ಕೆ ಪ್ರತಿ ಹೆಕ್ಟೇರ್ ಗೆ ಪರಿಹಾರ ದರ ಕೂಡ ನಿಗದಿ ಪಡಿಸಲಾಗಿದೆ. ಮಳೆಯಾಶ್ರಿತ ಬೆಳೆಗಳಿಗೆ ಪ್ರತಿ ಹೆಕ್ಟೇರ್ ಗೆ ರೂ.8,500 ಪರಿಹಾರ ನೀಡಲಾಗುತ್ತದೆ. ನೀರಾವರಿ ಬೆಳೆಗೆ 17,000 ಹಾಗೂ ಬಹು ವಾರ್ಷಿಕ ಬೆಳೆಗೆ ರೂ.22,500ರವರೆಗೆ ಬೆಳೆ ಪರಿಹಾರ ನೀಡೋದಾಕಿ ತಿಳಿಸಿದರು.

Join Telegram Group Join Now
WhatsApp Group Join Now

ಇನ್ನು ಓದಿ : ಯಾವುದೇ ಕಚೇರಿಗೆ ಹೋಗದೆ ಮನೆಯಲ್ಲಿ ಕುಳಿತು ಆಯುಷ್ಮನ್ ಕಾರ್ಡ್ ಮಾಡಿಸಿ, ಹೊಸ ಸೇವೆ ಆರಂಭ.

ಕೇಂದ್ರದಿಂದ ಅನುದಾನ ಬಂದ ಕೂಡಲೇ ಎನ್ ಡಿ ಆರ್ ಎಫ್ ಮಾರ್ಗಸೂಚಿಯಂತೆ ಬರ ಪರಿಹಾರವನ್ನು ರೈತರಿಗೆ ನೀಡಲಾಗುತ್ತದೆ ಎಂಬುದಾಗಿ ಹೇಳಿದ್ದಾರೆ.

Leave a Reply

ನಮ್ಮ WhatsApp ಗುಂಪಿಗೆ ಸೇರಲು ಇಲ್ಲಿ ಕ್ಲಿಕ್ ಮಾಡಿ