ಸಾರ್ವಜನಿಕ ಸೇವೆಯ ಕ್ಷೇತ್ರದಲ್ಲಿ ನರ್ಸ್ ಪಾತ್ರವು ವೀರರ ಪಾತ್ರಕ್ಕಿಂತ ಕಡಿಮೆಯಿಲ್ಲ. ಈ ಸಹಾನುಭೂತಿಯುಳ್ಳ ವ್ಯಕ್ತಿಗಳು ಸಮುದಾಯದ ಆರೋಗ್ಯ ಮತ್ತು ಯೋಗಕ್ಷೇಮವನ್ನು ಖಾತ್ರಿಪಡಿಸುವಲ್ಲಿ ಪ್ರಮುಖ ಪಾತ್ರವನ್ನು ವಹಿಸುತ್ತಾರೆ. ನೀವು ನಿಮ್ಮ ರಾಜ್ಯಕ್ಕೆ ಸೇವೆ ಸಲ್ಲಿಸಲು ಅವಕಾಶವನ್ನು ಬಯಸುತ್ತಿರುವ ಅರ್ಹ ಮತ್ತು ಸಮರ್ಪಿತ ನರ್ಸ್ ಆಗಿದ್ದರೆ, ಈ ಬ್ಲಾಗ್ ನಿಮಗಾಗಿ ಆಗಿದೆ. ರಾಜ್ಯ ಸರ್ಕಾರ ಇತ್ತೀಚೆಗೆ 100 ಸ್ಟಾಫ್ ನರ್ಸ್ ಹುದ್ದೆಗಳ ನೇಮಕಾತಿಯನ್ನು ಪ್ರಕಟಿಸಿದೆ, ಆದರೆ ಗಡಿಯಾರ ಮಚ್ಚೆ! ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವು ಸಮೀಪಿಸುತ್ತಿದೆ ಮತ್ತು ನೀವು ಈ ಅವಕಾಶವನ್ನು ಕಳೆದುಕೊಳ್ಳಬೇಡಿ ಎಂದು ಖಚಿತಪಡಿಸಿಕೊಳ್ಳಲು ನಿಮಗೆ ಅಗತ್ಯವಿರುವ ಎಲ್ಲಾ ಮಾಹಿತಿಯನ್ನು ನಾವು ನಿಮಗೆ ಒದಗಿಸುತ್ತೇವೆ.

ಕರ್ನಾಟಕ ಪರೀಕ್ಷಾ ಪ್ರಾಧಿಕಾರವು(Karnataka Examinations Authority) ಖಾಲಿ ಇರುವ ಹುದ್ದೆಗಳ ಭರ್ತಿಗೆ ನೇಮಕಾತಿ ಪ್ರಕ್ರಿಯೆ ನಡೆಸುತ್ತಿದೆ. ಒಟ್ಟು 100 ಸ್ಟಾಫ್ ನರ್ಸ್ (ನರ್ಸಿಂಗ್ ಆಫೀಸರ್) ಹುದ್ದೆಗಳು ಖಾಲಿ ಇದ್ದು, ಆಸಕ್ತರು ಈ ಕೂಡಲೇ ಅರ್ಜಿ ಸಲ್ಲಿಸಿ.
ಈ ಸುವರ್ಣಾವಕಾಶವನ್ನು ಮಿಸ್ ಮಾಡಿಕೊಳ್ಳಬೇಡಿ. ಕರ್ನಾಟಕ ಸರ್ಕಾರದ ಉದ್ಯೋಗ(Government Job) ಮಾಡಬಯಸುವವರಿಗೆ ಹಾಗೂ ಬೆಂಗಳೂರಿನಲ್ಲಿ ವೃತ್ತಿ ಜೀವನ ನಡೆಸಲು ಮುಂದಾಗಿರುವ ಅಭ್ಯರ್ಥಿಗಳಿಗೆ ಇದು ಒಳ್ಳೆಯ ಅವಕಾಶವಾಗಿದೆ. ಅರ್ಜಿ ಸಲ್ಲಿಸಲು ನವೆಂಬರ್ 2, 2023 ಅಂದರೆ ನಾಳೆ ಕೊನೆಯ ದಿನವಾಗಿದೆ(Last Date). ಅಭ್ಯರ್ಥಿಗಳು ಆನ್ಲೈನ್ (Online) ಮೂಲಕ ಅರ್ಜಿ ಹಾಕಿ.
ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.
ಸಂಸ್ಥೆ | ಕರ್ನಾಟಕ ಪರೀಕ್ಷಾ ಪ್ರಾಧಿಕಾರ |
---|---|
ಹುದ್ದೆ | ಸ್ಟಾಫ್ ನರ್ಸ್ |
ಒಟ್ಟು ಹುದ್ದೆ | 100 |
ವಿದ್ಯಾರ್ಹತೆ | ನರ್ಸಿಂಗ್ ಸರ್ಟಿಫಿಕೇಟ್ |
ವೇತನ | ಮಾಸಿಕ ₹ 33,450-62,600 |
ಉದ್ಯೋಗದ ಸ್ಥಳ | ಬೆಂಗಳೂರು |
ಅರ್ಜಿ ಸಲ್ಲಿಸಲು ಕೊನೆಯ ದಿನ | ನವೆಂಬರ್ 2, 2023 (ನಾಳೆ) |
ವಿದ್ಯಾರ್ಹತೆ:
ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ನರ್ಸಿಂಗ್ ಸರ್ಟಿಫಿಕೇಟ್ನ್ನು ಪಡೆದಿರಲೇಬೇಕು. ಜೊತೆಗೆ ರಿಜಿಸ್ಟರ್ ನರ್ಸ್ ಆಗಿರಬೇಕು.
ವಯೋಮಿತಿ:
ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ನವೆಂಬರ್ 2, 2023ಕ್ಕೆ ಕನಿಷ್ಠ 18 ವರ್ಷ ಮತ್ತು ಗರಿಷ್ಠ 35 ವರ್ಷ ಮೀರಿರಬಾರದು.
ವಯೋಮಿತಿ ಸಡಿಲಿಕೆ:
SC/ST/ಪ್ರವರ್ಗ- I ಅಭ್ಯರ್ಥಿಗಳು: 05 ವರ್ಷಗಳು
ಪ್ರವರ್ಗ-2A/2B/3A & 3B ಅಭ್ಯರ್ಥಿಗಳು: 03 ವರ್ಷಗಳು
ಅರ್ಜಿ ಶುಲ್ಕ:
SC/ST/ಪ್ರವರ್ಗ-I ಅಭ್ಯರ್ಥಿಗಳು: ರೂ.500/-
ಸಾಮಾನ್ಯ/OBC ಅಭ್ಯರ್ಥಿಗಳು: ರೂ.750/-
ಪಾವತಿ ವಿಧಾನ: ಗಣಕೀಕೃತ ಅಂಚೆ ಕಚೇರಿ
ವೇತನ:
ಮಾಸಿಕ ₹ 33,450-62,600
ಉದ್ಯೋಗದ ಸ್ಥಳ:
ಬೆಂಗಳೂರು
ಆಯ್ಕೆ ಪ್ರಕ್ರಿಯೆ:
ಅಭ್ಯರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆ ಬರೆಯಬೇಕು. ಆ ಮೂಲಕ ಅರ್ಹರನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಅಭ್ಯರ್ಥಿಗಳು ಆನ್ಲೈನ್ ಮೂಲಕ ಅಪ್ಲೈ ಮಾಡಲು .
KEA- ನೋಟಿಫಿಕೇಶನ್
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 04/10/2023
ಅರ್ಜಿ ಸಲ್ಲಿಸಲು ಕೊನೆಯ ದಿನ: ನವೆಂಬರ್ 2, 2023 (ನಾಳೆ)
ಇ-ಪೋಸ್ಟ್ ಆಫೀಸ್ ಮೂಲಕ ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನ: ನವೆಂಬರ್ 4, 2023
ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ 080-23460460 ಗೆ ಕರೆ ಮಾಡಿ.