LPG ಗ್ಯಾಸ್‌ ಬೆಲೆ ಏರಿಕೆ ಇಂದ ಕಂಗಾಲಾಗಿದ್ದವರಿಗೆ ಸಿಹಿಸುದ್ದಿ.! LPG ಸಿಲಿಂಡರ್‌ ಬೆಲೆಯಲ್ಲಿ ದಿಢೀರ್‌ 200 ಇಳಿಕೆ

Hello ಸ್ನೇಹಿತರೇ, ವರ್ಷಗಳ ಹಿಂದೆ ಎಲ್ಪಿಜಿ ಅಥವಾ ಅಡುಗೆ ಅನಿಲದ ಮೇಲಿನ ಸಬ್ಸಿಡಿಯನ್ನು ಸದ್ದಿಲ್ಲದೆ ಹಿಂತೆಗೆದುಕೊಂಡಿದ್ದ ಕೇಂದ್ರ ಸರ್ಕಾರ ಇದೀಗ ಅದೇ ಸಿಲಿಂಡರ್ಗೆ 200 ರೂಪಾಯಿ ಸಬ್ಸಿಡಿಯನ್ನು ಮರುಸ್ಥಾಪಿಸಲು ನಿರ್ಧರಿಸಿದೆ. ನವದೆಹಲಿ: ಹಲವಾರು ವರ್ಷಗಳ ಹಿಂದೆ ಎಲ್ಪಿಜಿ ಅಥವಾ ಅಡುಗೆ ಅನಿಲದ ಮೇಲಿನ ಸಬ್ಸಿಡಿಯನ್ನು ಸದ್ದಿಲ್ಲದೆ ಹಿಂತೆಗೆದುಕೊಂಡಿದ್ದ ಕೇಂದ್ರ ಸರ್ಕಾರ ಇದೀಗ ಅದೇ ಸಿಲಿಂಡರ್ಗೆ 200 ರೂಪಾಯಿ ಸಬ್ಸಿಡಿಯನ್ನು ಮರುಸ್ಥಾಪಿಸಲು ನಿರ್ಧರಿಸಿದೆ.

lpg cylinder price reduced by RS200

ಕೇಂದ್ರ ಸರ್ಕಾರವು 2-3 ವರ್ಷಗಳ ಹಿಂದೆ ಗ್ರಾಹಕರ ಬ್ಯಾಂಕ್ ಖಾತೆಗೆ LPG ಸಬ್ಸಿಡಿ ಕಳುಹಿಸುವುದನ್ನು ನಿಲ್ಲಿಸಿತ್ತು. ಆದರೆ ಇದೀಗ ಲೋಕಸಭೆ ಚುನಾವಣೆ ಮುಂದಿನ ಏಳು ತಿಂಗಳಲ್ಲಿ ನಡೆಯಲಿದ್ದು ಕೇಂದ್ರದಲ್ಲಿರುವ ಸರ್ಕಾರ ಮತ್ತೆ ಅಧಿಕಾರಕ್ಕೆ ಬರಲು ಪ್ರಯತ್ನಿಸುತ್ತಿರುವ ಮಧ್ಯೆ ಈ ಕ್ರಮಕ್ಕೆ ಮುಂದಾಗಿದೆ. ಕಳೆದ ತಿಂಗಳ ಕೊನೆಯಲ್ಲಿ ಗ್ರಾಹಕರ ಬ್ಯಾಂಕ್ ಖಾತೆಗಳಿಗೆ ಸಬ್ಸಿಡಿಯನ್ನು ಕಳುಹಿಸುತ್ತಿದೆ ಎಂಬುದನ್ನು ಇದು ಸಮರ್ಥಿಸಿಕೊಂಡಿದೆ. ಆದರೆ, ಹಲವು ವರ್ಷಗಳಿಂದ ಸಬ್ಸಿಡಿ ಮೊತ್ತ ಸಿಗುತ್ತಿಲ್ಲ ಎಂದು ಬಹುತೇಕ ಗ್ರಾಹಕರು ದೂರಿದ್ದಾರೆ.

ಸಬ್ಸಿಡಿ ಯೋಜನೆ: ಕಾಫಿ ಬೆಳೆಗಾರರಿಂದ ಅರ್ಜಿ ಆಹ್ವಾನಿಸಿದ ಕಾಫಿ ಮಂಡಳಿಕೇವಲ ಬಡವರಿಗೆ ಮತ್ತೆ 200 ರೂಪಾಯಿ ಸಬ್ಸಿಡಿಯನ್ನು ಮರುಸ್ಥಾಪಿಸುವ ನಿರ್ಧಾರವನ್ನು ಕೇಂದ್ರ ಕ್ಯಾಬಿನೆಟ್ ತೆಗೆದುಕೊಂಡಿದೆ ಎಂದು ಮಾಧ್ಯಮ ವರದಿಗಳು ತಿಳಿಸಿವೆ. ಆದರೆ ಈ ಬಗ್ಗೆ ಸಂಪೂರ್ಣ ವಿವರಗಳು ಮತ್ತು ಕ್ರಮದ ಅಧಿಕೃತ ದೃಢೀಕರಣವು ಇನ್ನೂ ಲಭ್ಯವಿಲ್ಲವಾಗಿಲ್ಲ. ಕಳೆದ ವರ್ಷ ಮೇ ತಿಂಗಳಲ್ಲಿ ಪ್ರತಿ ಬ್ಯಾರೆಲ್ಗೆ ಸುಮಾರು 118 ಡಾಲರ್ಗಳನ್ನು ತಲುಪಿದ ನಂತರ ಕಚ್ಚಾ ತೈಲ ಬೆಲೆಗಳು ಗಣನೀಯವಾಗಿ ಇಳಿದಿದ್ದರೂ ಸಹ ಎಲ್ಪಿಜಿ ಸಿಲಿಂಡರ್ ಬೆಲೆಗಳನ್ನು ಏಕೆ ಕಡಿತಗೊಳಿಸುತ್ತಿಲ್ಲ ಎಂದು ಕಳೆದ ತಿಂಗಳು ಸರ್ಕಾರವನ್ನು ಪ್ರಶ್ನಿಸಲಾಗಿತ್ತು. ಕಳೆದ ಏಳು ತಿಂಗಳಿನಿಂದ ಕಚ್ಚಾ ತೈಲ ಬೆಲೆಯು 60 ರಿಂದ 80 ಡಾಲರ್ ವ್ಯಾಪ್ತಿಯಲ್ಲಿದೆ. ಸಬ್ಸಿಡಿಯನ್ನು ಅರ್ಹ ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ಜಮಾ ಮಾಡಲಾಗುತ್ತದೆ ಎಂದು ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವ ಹರ್ದೀಪ್ ಸಿಂಗ್ ಪುರಿ ಕಳೆದ ತಿಂಗಳು ರಾಜ್ಯಸಭೆಯಲ್ಲಿ ಹೇಳಿದರು.

LPG ಗ್ಯಾಸ್‌ ಪಿಎಂ ಉಜ್ವಲ ಯೋಜನೆಯ ಫಲಾನುಭವಿಗಳಿಗೆ 400 ರೂ. ಕಡಿಮೆ ಬೆಲೆಗೆ ಸಿಲಿಂಡರ್ ಲಭ್ಯ!

ಕಳೆದ ವರ್ಷ, ರಷ್ಯಾ-ಉಕ್ರೇನ್ ಯುದ್ಧದಿಂದಾಗಿ ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಮತ್ತು ಅನಿಲದ ಬೆಲೆಯಲ್ಲಿ ತೀವ್ರ ಜಿಗಿತ ಕಂಡಿತ್ತು, ಮೇ 2022 ರಲ್ಲಿ, ಮೋದಿ ಸರ್ಕಾರವು ಉಜ್ವಲ ಯೋಜನೆ ಫಲಾನುಭವಿಗಳಿಗೆ ಪ್ರತಿ ಸಿಲಿಂಡರ್‌ಗೆ 200 ರೂ. ಸಬ್ಸಿಡಿ ನೀಡುತ್ತಿದೆ. ಇದರ ಅವಧಿಯನ್ನು ಮಾರ್ಚ್ 31, 2024 ರವರೆಗೆ ವಿಸ್ತರಿಸಲಾಗಿದೆ. ಈ ಯೋಜನೆಯಡಿ ಪ್ರತಿ ಸಿಲಿಂಡರ್‌ಗೆ 900 ರೂ. ಪಾವತಿ ಮಾಡಿದಂತೆ ಆಗುತ್ತದೆ. ಈಗ ಎಲ್‌ಪಿಜಿ ಸಿಲಿಂಡರ್‌ಗೆ ಹೆಚ್ಚುವರಿಯಾಗಿ 200 ರೂ ಸಬ್ಸಿಡಿ ನೀಡಲು ನಿರ್ಧರಿಸಿದೆ.

LPG ಗ್ಯಾಸ್‌ 9.58 ಕೋಟಿ ಜನರು ಪ್ರಧಾನಮಂತ್ರಿ ಉಜ್ವಲಾ ಯೋಜನೆಯ ಫಲಾನುಭವಿಗಳು

ಈ ಯೋಜನೆಯನ್ನು ಪ್ರಧಾನಿ ಮೋದಿಯವರು 2016ರ ಮೇ 1ರಂದು ಪ್ರಾರಂಭಿಸಿದರು. ಪ್ರಸ್ತುತ, ಪ್ರಧಾನ ಮಂತ್ರಿ ಉಜ್ವಲ ಯೋಜನೆಯ ಒಟ್ಟು 9.58 ಕೋಟಿಗೂ ಹೆಚ್ಚು ಫಲಾನುಭವಿಗಳಿದ್ದಾರೆ. ಈಗ ಸಾಮಾನ್ಯ ಜನರು ಸಬ್ಸಿಡಿ ರಹಿತ ಎಲ್‌ಪಿಜಿ ಸಿಲಿಂಡರ್ ಅನ್ನು ರೀಫಿಲ್ ಮಾಡಲು 1103 ರೂ. ಪಾವತಿ ಮಾಡುತ್ತಿದ್ದಾರೆ. ಪಿಎಂ ಉಜ್ವಲ ಯೋಜನೆಯ ಫಲಾನುಭವಿಗಳಿಗೆ ಈಗಾಗಲೇ 200 ರೂ. ಸಬ್ಸಿಡಿ ನೀಡುತ್ತಿದೆ. ಮತ್ತೆ 200 ರೂ. ಕಡಿತ ಮಾಡಲು ಸಿದ್ಧತೆ ನಡೆಸಿದೆ.

Leave a Reply

ನಮ್ಮ WhatsApp ಗುಂಪಿಗೆ ಸೇರಲು ಇಲ್ಲಿ ಕ್ಲಿಕ್ ಮಾಡಿ