ನ್ಯಾಷನಲ್ ಥರ್ಮಲ್ ಪವರ್ ಕಾರ್ಪೊರೇಷನ್ ಲಿಮಿಟೆಡ್ (National Thermal Power Corporation Limited) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 50 ಎಕ್ಸಿಕ್ಯೂಟಿವ್(Executive) ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು.

ನವೆಂಬರ್ 10, 2023 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಆನ್ಲೈನ್(Online) ಮೂಲಕ ಅಪ್ಲೈ ಮಾಡಬೇಕು. ಕೇಂದ್ರ ಸರ್ಕಾರದ ಉದ್ಯೋಗ ಹುಡುಕುತ್ತಿರುವವರು ಈ ಅವಕಾಶವನ್ನು ಬಳಸಿಕೊಳ್ಳಿ.
ಅರ್ಜಿ ಸಲ್ಲಿಸುವ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.
ಸಂಸ್ಥೆ | ನ್ಯಾಷನಲ್ ಥರ್ಮಲ್ ಪವರ್ ಕಾರ್ಪೊರೇಷನ್ ಲಿಮಿಟೆಡ್ |
---|---|
ಹುದ್ದೆ | ಎಕ್ಸಿಕ್ಯೂಟಿವ್ |
ಒಟ್ಟು ಹುದ್ದೆ | 50 |
ವಿದ್ಯಾರ್ಹತೆ | ಬಿಇ/ಬಿ.ಟೆಕ್ |
ವೇತನ | ಮಾಸಿಕ ₹ 90,000 |
ಉದ್ಯೋಗದ ಸ್ಥಳ | ಭಾರತ |
ಅರ್ಜಿ ಸಲ್ಲಿಸಲು ಕೊನೆಯ ದಿನ | ನವೆಂಬರ್ 10, 2023 |
ವಿದ್ಯಾರ್ಹತೆ:
ನ್ಯಾಷನಲ್ ಥರ್ಮಲ್ ಪವರ್ ಕಾರ್ಪೊರೇಷನ್ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ EEE/ECE/ಮೆಕ್ಯಾನಿಕಲ್/ ಇನ್ಸ್ಟ್ರುಮೆಂಟೇಶನ್ ಎಂಜಿನಿಯರಿಂಗ್ನಲ್ಲಿ ಬಿಇ/ಬಿ.ಟೆಕ್ ಪೂರ್ಣಗೊಳಿಸಿರಬೇಕು.
ವಯೋಮಿತಿ:
ನ್ಯಾಷನಲ್ ಥರ್ಮಲ್ ಪವರ್ ಕಾರ್ಪೊರೇಷನ್ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಗರಿಷ್ಠ 35 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.
ಅರ್ಜಿ ಶುಲ್ಕ:
SC/ST/XSM/PwBD/ಮಹಿಳಾ ಅಭ್ಯರ್ಥಿಗಳು- ಅರ್ಜಿ ಶುಲ್ಕ ಇಲ್ಲ.
ಸಾಮಾನ್ಯ/EWS/OBC ಅಭ್ಯರ್ಥಿಗಳು- 300 ರೂ.
ಪಾವತಿಸುವ ವಿಧಾನ- ಆನ್ಲೈನ್/ ಆಫ್ಲೈನ್
ವೇತನ:
ಮಾಸಿಕ ₹ 90,000
ಉದ್ಯೋಗದ ಸ್ಥಳ:
ಭಾರತದಲ್ಲಿ ಎಲ್ಲಿ ಬೇಕಾದರೂ
ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ಸಂದರ್ಶನ
ಅಭ್ಯರ್ಥಿಗಳು ಆನ್ಲೈನ್ ಮೂಲಕ ಅಪ್ಲೈ ಮಾಡಲು .
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 27/10/2023
ಅರ್ಜಿ ಸಲ್ಲಿಸಲು ಕೊನೆಯ ದಿನ: ನವೆಂಬರ್ 10, 2023