ರಾಜ್ಯದ ಎಲ್ಲಾ ವಿದ್ಯಾರ್ಥಿಗಳಿಗೆ ಗಿಫ್ಟ್ ಕೊಟ್ಟ ಸರ್ಕಾರ, ಹೊಸ ಶಿಕ್ಷಣ ನೀತಿ ರದ್ದು.! ಸಿದ್ದರಾಮಯ್ಯ ಮಹತ್ವದ ಘೋಷಣೆ.

Hello ಸ್ನೇಹಿತರೇ , ಈ ಬಾರಿ ನಡೆದ ರಾಜ್ಯ ವಿಧಾನಸಭಾ ಚುನಾವಣೆಯ ಬಳಿಕ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರವನ್ನು ಪಡೆದುಕೊಂಡಿದೆ. ಅಧಿಕಾರಕ್ಕೆ ಬಂದ ತಕ್ಷಣ ಕಾಂಗ್ರೆಸ್ ಸರ್ಕಾರ ಸಾಕಷ್ಟು ನಿಯಮವನ್ನು ಬದಲಿಸಿದೆ. ಇದೀಗ ಈ ಹಿಂದೆ ಬಿಜೆಪಿ ಸರ್ಕಾರ ಜಾರಿಗೊಳಿಸಿದ್ದ ಪದವಿ ಶಿಕ್ಷಣ ನೀತಿಯಲ್ಲಿ ಕಾಂಗ್ರೆಸ್ ಸರ್ಕಾರ ಮಹತ್ವದ ಬದಲಾವಣೆ ತರಲು ನಿರ್ಧಾರ ಕೈಗೊಂಡಿದೆ. ಹೊಸ ಶಿಕ್ಷಣ ನೀತಿಯನ್ನು ರದ್ದುಪಡಿಸುವ ಬಗ್ಗೆ ಸಭೆಯಲ್ಲಿ ಚರ್ಚಿಸಿ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ಮಹತ್ವದ ಘೋಷಣೆ ಹೊರಡಿಸಿದ್ದಾರೆ. ಮುಂದಿನ ಶೈಕ್ಷಣಿಕ ವರ್ಷದಲ್ಲಿ ಹೊಸ ನಿಯಮ ಜಾರಿಯಾಗಲಿದೆ.

nep cancelled in karnataka

ಮುಂದಿನ ಶೈಕ್ಷಣಿಕ ವರ್ಷದಿಂದ ಹೊಸ ಶಿಕ್ಷಣ ನೀತಿ ರದ್ದು

ಈ ಹಿಂದೆ ಬಿಜೆಪಿ ಸರ್ಕಾರ ಪದವಿ ಶಿಕ್ಷಣದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ (National Education Policy) ಯನ್ನು ಜಾರಿಗೊಳಿಸಲು ನಿರ್ಧರಿಸಿತ್ತು. ಏನ್ ಇಪಿ ಅಡಿಯಲ್ಲಿ ನಾಲ್ಕು ವರ್ಷಗಳ ಅವಧಿಯ ಆನರ್ಸ್ ಪದವಿ ಕೋರ್ಸ್ ಆರಂಭಿಸುವ ತೀರ್ಮಾನ ಕೈಗೊಂಡಿತ್ತು. ಇದೀಗ ಕಾಂಗ್ರೆಸ್ ಸರ್ಕಾರ ರಾಜ್ಯದ ಈ ಶಿಕ್ಷಣ ನೀತಿಯನ್ನು ಬದಲಾಯಿಸಲು ತೀರ್ಮಾನಿಸಿದೆ. ಕೆಪಿಸಿಸಿ ಕಚೇರಿಯಲ್ಲಿ ನಡೆದ ಕರ್ನಾಟಕ ಕಾಂಗ್ರೆಸ್ ಸಮಿತಿಯ ಸರ್ವ ಸದಸ್ಯರ ಸಭೆಯಲ್ಲಿ ಹೊಸ NEP ರದ್ದತಿಯ ಬಗ್ಗೆ ತೀರ್ಮಾನ ಕೈಗೊಳ್ಳಲಾಗಿದೆ.

ಹೊಸ ಶಿಕ್ಷಣ ನೀತಿ ರದ್ದುಪಡಿಸುವ ಬಗ್ಗೆ ಸಿದ್ದರಾಮಯ್ಯ ಘೋಷಣೆ

ರಾಜ್ಯದಲ್ಲಿ ಏನ್ ಇಪಿ ಅನುಷ್ಠಾನವನ್ನು ಕೈಬಿಟ್ಟು ಪ್ರತ್ಯೇಕವಾದ ರಾಜ್ಯ ಶಿಕ್ಷಣ ನೀತಿಯನ್ನು ಜಾರಿಗೊಳಿಸುವ ಬಗ್ಗೆ ಕಾಂಗ್ರೆಸ್ ಸರ್ಕಾರ ಚಿಂತನೆ ನಡೆಸುತ್ತಿದೆ. ಈ ನಿಟ್ಟಿನಲ್ಲಿ ಪದವಿ ಕೋರ್ಸ್ ಗಳನ್ನೂ ಮೂರು ವರ್ಷಕ್ಕೆ ಸೀಮಿತಗೊಳಿಸುವ ಕುರಿತು ನಿರ್ಧಾರ ಕೈಗೊಂಡಿದೆ. ಹಿಂದಿನ ಸರ್ಕಾರ ನಿರ್ಧರಿಸಿರುವ ನಾಲ್ಕು ವರ್ಷದ ಪದವಿ ಕೋರ್ಸ್ ಅನ್ನು ನೀಡುವ ತೀರ್ಮಾನವನ್ನು ಕಾಂಗ್ರೆಸ್ ಸರ್ಕಾರ ಕೈಬಿಟ್ಟಿದೆ.

ಪದವಿ ತರಗತಿಗಳ ಆರಂಭಕ್ಕೆ ಪೂರ್ವಭಾವಿಯಾಗಿ ರಾಜ್ಯದ ಎಲ್ಲಾ ವಿಶ್ವವಿದ್ಯಾಲಯಗಳ ಅಧ್ಯಯನ ಮಂಡಳಿಗಳಿಗೆ ಸುತ್ತೋಲೆ ಹೊರಡಿಸಿರುವ ಉನ್ನತ ಶಿಕ್ಷಣ ಇಲಾಖೆ, ಐದು ಮತ್ತು ಆರನೇ ಸೆಮಿಸ್ಟರ್ ಗಳಿಗೆ ಮಾತ್ರ ಪಠ್ಯಕ್ರಮ ರೂಪಿಸುವಂತೆ ಸೂಚನೆ ನೀಡಿದೆ.

ಇನ್ನುಮುಂದೆ ಏನ್ ಇಪಿ ಅಡಿಯಲ್ಲಿ ನಾಲ್ಕು ವರ್ಷದ ಪದವಿ ಕೋರ್ಸ್ ಸ್ಥಗಿತ ಆಗಲಿದೆ. ಕರ್ನಾಟಕದಲ್ಲಿ ಮುಂದಿನ ಶೈಕ್ಷಣಿಕ ವರ್ಷದಿಂದ ಹೊಸ ಶಿಕ್ಷಣ ನೀತಿ ರದ್ದುಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕೃತ ಘೋಷಣೆ ಹೊರಡಿಸಿದ್ದಾರೆ.

ಇತರೆ ವಿಷಯಗಳು :

Breaking News.! ಕೇಂದ್ರದಿಂದ ಮಹಿಳೆಯರಿಗೆ “ಲಖ್ಪತಿ ದೀದಿ ಯೋಜನೆ” ಜಾರಿಗೆ, ಲಕ್ಷಾಧಿಪತಿಗಳಾಗಲಿದ್ದಾರೆ ಮಹಿಳೆಯರು.

Join Telegram Group Join Now
WhatsApp Group Join Now

Google ಗೆ ಎದುರಾದ ದೊಡ್ಡ ಅಪಾಯ!  ಟೆಕ್‌ ಲೋಕದಲ್ಲಿ ‘ಚಾಟ್‌ ಜಿಪಿಟಿ’ ಬಿರುಗಾಳಿ, ಏನಿದು ಹೊಸ ತಂತ್ರಾಂಶ? ಚಾಟ್‌ GPT 4 ಎಂದರೇನು?

Leave a Reply

ನಮ್ಮ WhatsApp ಗುಂಪಿಗೆ ಸೇರಲು ಇಲ್ಲಿ ಕ್ಲಿಕ್ ಮಾಡಿ