ಶಿವಮೊಗ್ಗ ವಿಮಾನ ನಿಲ್ದಾಣದ ಬಗ್ಗೆ ಪ್ರಧಾನಿ ಮೋದಿ ಟ್ವೀಟ್,Shimogga Kuvempu Airport, Modi twit

ಶಿವಮೊಗ್ಗ ವಿಮಾನ ನಿಲ್ದಾಣ, ಶಿವಮೊಗ್ಗ ವಿಮಾನ ನಿಲ್ದಾಣ ಕುರಿತು ಪ್ರಧಾನಿ ಮೋದಿ ಟ್ವೀಟ್ | Shimogga Kuvempu Airport

Shimogga Kuvempu Airport

ಮಲೆನಾಡಿನ ಜನರ ದಶಕಗಳ ಕನಸು ಕೊನೆಗೂ ನನಸಾಗಿದೆ. ಶಿವಮೊಗ್ಗದ ಸೋಗಾನೆಯಲ್ಲಿ ವಿಮಾನ ನಿಲ್ದಾಣ ನಿರ್ಮಾಣ ಕಾಮಗಾರಿ ಪೂರ್ಣಗೊಂಡಿದೆ. ಫೆಬ್ರವರಿ 27ರ ಸೋಮವಾರ ಭಾರತದ ಪ್ರಧಾನಿ ನರೇಂದ್ರ ಮೋದಿ ವಿಮಾನ ನಿಲ್ದಾಣ ಲೋಕಾರ್ಪಣೆ ಮಾಡಲಿದ್ದಾರೆ. ಇದಕ್ಕೂ ಮೊದಲು ಮೋದಿ ವಿಮಾನ ನಿಲ್ದಾಣದ ಕುರಿತು ಟ್ವೀಟ್ ಮಾಡಿದ್ದಾರೆ.

ಶಿವಮೊಗ್ಗದ ಬಿಜೆಪಿ ಸಂಸದ ಬಿ. ವೈ. ರಾಘವೇಂದ್ರ ಡ್ರೋನ್ ಕ್ಯಾಮೆರಾ ಮೂಲಕ ಸೆರೆ ಹಿಡಿಯಲಾದ ಶಿವಮೊಗ್ಗ ವಿಮಾನ ನಿಲ್ದಾಣದ ವಿಡಿಯೋವನ್ನು ಗುರುವಾರ ಟ್ವೀಟ್‌ ಮಾಡಿದ್ದರು. ಪ್ರಧಾನಿ ನರೇಂದ್ರ ಮೋದಿ ಈ ಟ್ವೀಟ್‌ ಉಲ್ಲೇಖಿಸಿ ಶುಕ್ರವಾರ ವಿಮಾನ ನಿಲ್ದಾಣದ ಬಗ್ಗೆ ಟ್ವೀಟ್‌ ಮಾಡಿದ್ದಾರೆ.

ಪ್ರಧಾನಿ ಮೋದಿ ಟ್ವೀಟ್‌ಗೆ ಬಿ. ವೈ. ರಾಘವೇಂದ್ರ ಸಹ ಪ್ರತಿಕ್ರಿಯೆ ನೀಡಿದ್ದಾರೆ. ‘ಶಿವಮೊಗ್ಗ ವಿಮಾನ ನಿಲ್ದಾಣವು ಆರ್ಥಿಕ ಚೇತರಿಕೆಯನ್ನು ತರಲಿ ಹಾಗೂ ಸಂಪರ್ಕ ಕ್ರಾಂತಿಯ ಜೊತೆಗೆ ಪ್ರವಾಸೋದ್ಯಮ ಕ್ಷೇತ್ರದಲ್ಲಿ ಇನ್ನಷ್ಟು ಅಭಿವೃದ್ಧಿಯನ್ನು ಸಾಧಿಸಲಿ‘ ಎಂದು ಹಾರೈಸಿದ ಸನ್ಮಾನ್ಯ ಶ್ರೀ ನರೇಂದ್ರ ಮೋದಿಯವರಿಗೆ ಹೃತ್ಪೂರ್ವಕವಾದ ಧನ್ಯವಾದಗಳು ಎಂದು ಹೇಳಿದ್ದಾರೆ.

ಈ ವಿಮಾನ ನಿಲ್ದಾಣವು ನಿಮ್ಮ ಅಮೃತ ಹಸ್ತದಿಂದ ಲೋಕಾರ್ಪಣೆಗೊಳ್ಳಲಿದೆ. ಅಲ್ಲದೇ ಹಲವು ಅಭಿವೃದ್ಧಿಯ ಯೋಜನೆಗಳ ಶಂಕುಸ್ಥಾಪನೆಗೆ ತಾವು ಅಡಿಗಲ್ಲು ಹಾಕುವ ಮೂಲಕ ಆಶೀರ್ವದಿಸಬೇಕೆಂದು ತಮ್ಮನ್ನು ಕೋರಿಕೊಳ್ಳುತ್ತೇನೆ. ಶಿವಮೊಗ್ಗದ ಮಹಾಜನತೆಯ ಪರವಾಗಿ ತಮಗೆ ಆತ್ಮೀಯವಾದ ಸ್ವಾಗತವನ್ನು ಕೋರುತ್ತೇನೆ’ ಎಂದು ಶಿವಮೊಗ್ಗಕ್ಕೆ ಪ್ರಧಾನಿ ನರೇಂದ್ರ ಮೋದಿಯನ್ನು ಬಿ. ವೈ. ರಾಘವೇಂದ್ರ ಸ್ವಾಗತಿಸಿದ್ದಾರೆ. ಪರೀಕ್ಷಾರ್ಥ ಸಂಚಾರ ಯಶಸ್ವಿ; ರನ್‌ ವೇ ಸೇರಿದಂತೆ ವಿವಿಧ ಕಾಮಗಾರಿ ಪೂರ್ಣಗೊಂಡಿರುವ ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ವಿಮಾನಗಳ ಪ್ರಾಯೋಗಿಕ ಹಾರಾಟವೂ ಯಶಸ್ವಿಯಾಗಿದೆ. ಮಂಗಳವಾರ ಭಾರತೀಯ ವಾಯುಪಡೆಯ ಬೋಯಿಂಗ್ 737 ಮಾದರಿಯ ವಿಮಾನ ಶಿವಮೊಗ್ಗದಲ್ಲಿ ಯಶಸ್ವಿಯಾಗಿ ಲ್ಯಾಂಡ್ ಆಗಿ ಬಳಿಕ ಟೇಕಾಫ್ ಆಗಿತ್ತು. ಗುರುವಾರ ವಾಯುಪಡೆಯ ಮತ್ತೊಂದು ವಿಮಾನ ಶಿವಮೊಗ್ಗಕ್ಕೆ ಪರೀಕ್ಷಾರ್ಥ ಸಂಚಾರಕ್ಕಾಗಿ ಆಗಮಿಸಿತ್ತು. ಕೇಂದ್ರ ವಿಮಾನಯಾನ ಖಾತೆ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಕನ್ನಡದಲ್ಲಿ ಟ್ವೀಟ್ ಮಾಡುವ ಮೂಲಕ ಶಿವಮೊಗ್ಗ ವಿಮಾನ ನಿಲ್ದಾಣ ಉದ್ಘಾಟನೆ ಕಾರ್ಯಕ್ರಮಕ್ಕೆ ಜನರಿಗೆ ಆಹ್ವಾನ ನೀಡಿದ್ದಾರೆ. ಸಂಸದ ಬಿ. ವೈ. ರಾಘವೇಂದ್ರ ಸಹ ವಿಮಾನ ನಿಲ್ದಾಣದ ಫೋಟೋ, ವಿಡಿಯೋ ಪೋಸ್ಟ್ ಮಾಡುವ ಮೂಲಕ ಜನರನ್ನು ಆಹ್ವಾನಿಸುತ್ತಿದ್ದಾರೆ. ಶಿವಮೊಗ್ಗ ವಿಮಾನ ನಿಲ್ದಾಣ ಮಾಜಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರ ಕನಸು. ಫೆಬ್ರವರಿ 27 ಅವರ ಹುಟ್ಟುಹಬ್ಬ ಅಂದೇ ಅವರ ಕನಸು ಸಾಕಾರಗೊಳ್ಳುತ್ತಿದೆ. ಪ್ರಧಾನಿ ನರೇಂದ್ರ ಮೋದಿ ದೆಹಲಿಯಿಂದ ವಿಶೇಷ ವಿಮಾನದಲ್ಲಿ ಶಿವಮೊಗ್ಗಕ್ಕೆ ಆಗಮಿಸುವ ಮೂಲಕ ವಿಮಾನ ನಿಲ್ದಾಣವನ್ನು ಉದ್ಘಾಟನೆ ಮಾಡಲಿದ್ದಾರೆ. ಅಂದು ಶಿವಮೊಗ್ಗದ ವಿವಿಧ ಯೋಜನೆಗಳಿಗೆ ಸಹ ಅವರು ಶಂಕುಸ್ಥಾಪನೆಯನ್ನು ಮಾಡಲಿದ್ದಾರೆ

Shimogga Kuvempu Airport

4 thoughts on “ಶಿವಮೊಗ್ಗ ವಿಮಾನ ನಿಲ್ದಾಣದ ಬಗ್ಗೆ ಪ್ರಧಾನಿ ಮೋದಿ ಟ್ವೀಟ್,Shimogga Kuvempu Airport, Modi twit

Leave a Reply

ನಮ್ಮ WhatsApp ಗುಂಪಿಗೆ ಸೇರಲು ಇಲ್ಲಿ ಕ್ಲಿಕ್ ಮಾಡಿ