ಮಹತ್ವಾಕಾಂಕ್ಷಿ ಶಿಕ್ಷಣತಜ್ಞರು ಕುತೂಹಲದಿಂದ ಕಾಯುತ್ತಿದ್ದ ಕ್ಷಣ ಬಂದಿದೆ! ಸಹಾಯಕ ಪ್ರಾಧ್ಯಾಪಕರ ಹುದ್ದೆಗೆ ಅಂತಿಮ “ಆಯ್ಕೆ ಪಟ್ಟಿ” ಪ್ರಕಟವಾಗಿದೆ. ಈ ಪ್ರತಿಷ್ಠಿತ ಪಾತ್ರಕ್ಕಾಗಿ ಅರ್ಜಿ ಸಲ್ಲಿಸಿದವರ ಶೈಕ್ಷಣಿಕ ಪ್ರಯಾಣದಲ್ಲಿ ಇದು ಮಹತ್ವದ ಮೈಲಿಗಲ್ಲನ್ನು ಗುರುತಿಸುತ್ತದೆ.

ಕಾಲೇಜು ಶಿಕ್ಷಣ ಇಲಾಖೆಯಲ್ಲಿ ( Department of Collegiate Education ) ಖಾಲಿ ಇದ್ದಂತ 1,242 ಸಹಾಯಕ ಪ್ರಾಧ್ಯಾಪಕರ ಹುದ್ದೆಗಳಿಗೆ ( Assistant Professor Recruitment ) ಸ್ಪರ್ಧಾತ್ಮಕ ಪರೀಕ್ಷೆ ಮೂಲಕ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿತ್ತು.
ಈ ಹುದ್ದೆಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಯ ನಂತ್ರ, ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಪ್ರಕಟಿಸಲಾಗಿತ್ತು. ಈಗ ಅಂತಿಮ ಆಯ್ಕೆ ಪಟ್ಟಿಯನ್ನು ಪ್ರಕಟಿಸಲಾಗಿದೆ.
ಈ ಕುರಿತಂತೆ ವಿಶೇಷ ರಾಜ್ಯಪತ್ರದಲ್ಲಿ ಅಧಿಸೂಚನೆ ಹೊರಡಿಸಲಾಗಿದ್ದು, ಸರ್ಕಾರಿ ಪದವಿ ಕಾಲೇಜುಗಳಲ್ಲಿ ಖಾಲಿ ಇರುವ ಮತ್ತು ನೇರ ನೇಮಕಾತಿ ಮೂಲಕ ಭರ್ತಿ ಮಾಡುವ ಸಹಾಯಕ ಪ್ರಾಧ್ಯಾಪಕರ ಹುದ್ದೆಗಳಿಗೆ ಅಂತಿಮ ಆಯ್ಕೆ ಪಟ್ಟಿಯನ್ನು ಪ್ರಕಟಿಸಲಾಗಿದೆ ಎಂದು ತಿಳಿಸಿದೆ.
2015ರ ನೇಮಕಾತಿಯಲ್ಲಿ ಅರ್ಹ ಅಭ್ಯರ್ಥಿಗಳು ಲಭ್ಯವಿಲ್ಲದೇ ಭರ್ತಿಯಾಗದಿರುವ ಹುದ್ದೆಗಳು ಹಾಗೂ ಪ್ರಸ್ತುತ ನೇಮಕಾತಿಯಲ್ಲಿನ ವಿಷಯವಾರು, ಸ್ಥಳೀಯ ವೃಂದ, ಮಿಕ್ಕುಳಿದ ವೃಂದ ಹಾಗೂ ಕಾಲೇಜು ಶಿಕ್ಷಣ ಇಲಾಖೆಯ ಸಿ-ವರ್ಗದ ಸಿಬ್ಬಂದಿಗಳಿಗೆ ಮೀಸಲಿರುವ ಹುದ್ದೆಗಳಿಗೆ ಆಯ್ಕೆಯಾದ ಸಿಬ್ಬಂದಿಗಳ ಪ್ರತ್ಯೇಕ ಆಯ್ಕೆ ಪಟ್ಟಿಯನ್ನು ಪ್ರಕಟಿಸಲಾಗಿದೆ ಎಂದು ತಿಳಿಸಿದೆ.
ಅಂದಹಾಗೇ, ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಸಹಾಯಕ ಪ್ರಾಧ್ಯಾಪಕರ ನೇಮಕಾತಿಗೆ ಸಂಬಂಧಿಸಿದಂತೆ ಬಾಕಿಯಿರುವ ಎಲ್ಲ ಪ್ರಕ್ರಿಯೆಗಳಿಗೂ ಚಾಲನೆ ನೀಡಬೇಕು ಎಂದು ಆಗ್ರಹಿಸಿ, ಸಹಾಯಕ ಪ್ರಾಧ್ಯಾಪಕ ಹುದ್ದೆಗೆ ತಾತ್ಕಾಲಿಕ ಪಟ್ಟಿಯಲ್ಲಿ ಆಯ್ಕೆಯಾಗಿರುವ ಅಭ್ಯರ್ಥಿಗಳು ಪ್ರತಿಭಟನೆ ನಡೆಸಿ, ಸರ್ಕಾರವನ್ನು ಹಲವು ಭಾರಿ ಆಗ್ರಹಿಸಿದ್ದರು. ಈ ಬಳಿಕ ಕಾಲೇಜು ಶಿಕ್ಷಣ ಇಲಾಖೆಯಿಂದ ಇದೀಗ ಅಂತಿಮ ಆಯ್ಕೆ ಪಟ್ಟಿಯನ್ನು ಪ್ರಕಟಿಸಲಾಗಿದೆ.
1242 ಸಹಾಯಕ ಪ್ರಾಧ್ಯಾಪಕರ ಅಂತಿಮ ಆಯ್ಕೆ ಪಟ್ಟಿಯನ್ನು ನೋಡೋದಕ್ಕೆಇಲ್ಲಿ ಕ್ಲಿಕ್ಮಾಡಿ. ನಿಮಗೆ ಪಿಡಿಎಫ್ ಫೈಲ್ ಸಿಗಲಿದೆ. ಅದನ್ನು ಡೌನ್ ಲೋಡ್ ಮಾಡಿಕೊಂಡು ನೋಡಿ. ಇದಲ್ಲದೇ ಕಾಲೇಜು ಶಿಕ್ಷಣ ಇಲಾಖೆಯhttps://dce.karnataka.gov.in/ಜಾಲತಾಣಕ್ಕೆ ಭೇಟಿ ನೀಡಿಯೂ ನೋಡಬಹುದಾಗಿದೆ.